ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸರಕಾರ ಬಾಕಿ ಉಳಿಸಿಕೊಂಡಿರುವ 14,000 ಕೋಟಿ ರೂ. ಜಿಎಸ್ ಟಿ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್- ಕೇಸರಿ ಶಾಲು ವಿವಾದ: ಎರಡು ಕೋಮಿನ ನಡುವೆ ಕಲ್ಲುತೂರಾಟ
ಸೋಮವಾರ (ಫೆ.07) ಕೇಂದ್ರ ಹಣಕಾಸು ಸಚಿವರನ್ನ ಸಿಎಂ ಭೇಟಿ ಮಾಡಿದ್ದು, ರಾಜ್ಯಕ್ಕೆ ಬಾಕಿ ಇರುವ ಹಣ ಬಿಡುಗಡೆ ಮಾಡುವಂತೆ ಆಗ್ರಹ ಮಾಡಿದ್ದಾರೆ. ರಾಜ್ಯದ ಬಾಕಿ ಹಣ ಬಿಡುಗಡೆಗೆ ಒತ್ತಡ ಹೇರಿ ಎಂದು ಸಿಎಂ ಬೊಮ್ಮಾಯಿ ರಾಜ್ಯದ ಸಂಸದರ ನಿಯೋಗದಲ್ಲಿ ತೆರಳಿ ಮನವಿ ಮಾಡಿದ್ದಾರೆ. ಪೂರ್ಣ ಹಣ ಬಿಡುಗಡೆ ಸದ್ಯಕ್ಕೆ ಸಾಧ್ಯವಿಲ್ಲ, 3800/4000 ಕೋಟಿ ಕೊಡುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಸಿಎಂ ಬಸವರಾಜ ಬೊಮ್ಮಾಯಿಗೆ ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾಮಾನ್ಯವಾಗಿ ಸಂಸದರ ಜತೆಗಿನ ಭೇಟಿ ಸಂದರ್ಭದಲ್ಲಿ ರಾಜ್ಯಕ್ಕೆ ಬರಬೇಕಾದ ಅನುದಾನದ ವಿಚಾರವಾಗಿಯೇ ಚರ್ಚೆ ನಡೆಯುತ್ತದೆ. ಬೊಮ್ಮಾಯಿ ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡಿದ್ದಾರೆ.
ಆದರೆ ರಾಜ್ಯ ಹಣಕಾಸು ಇಲಾಖೆ ಮೂಲಗಳ ಪ್ರಕಾರ ರಾಜ್ಯದ ಜಿಎಸ್ ಟಿ ಪರಿಹಾರ ಬಾಕಿ ಪೂರ್ಣ ಪ್ರಮಾಣದಲ್ಲಿ ಲಭಿಸುವ ಸಾಧ್ಯತೆ ಕಡಿಮೆ. ಈ ಬಾರಿ ರಾಜ್ಯಗಳಿಗೆ 1 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲದ ಪ್ರಸ್ತಾಪ ಮಾಡಲಾಗಿದ್ದು, ಸಾಲದ ರೂಪದಲ್ಲಿ ಇದು ಲಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.