Advertisement
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಎಸೆಸೆಲ್ಸಿ ಪರೀಕ್ಷೆಯ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಾಗಿ ಜಿಲ್ಲೆಯಲ್ಲಿ 20 ಕ್ಲಸ್ಟರ್ ಸಹಿತ, 29 ಕ್ಲಸ್ಟರ್ ರಹಿತ ಮತ್ತು 2 ಖಾಸಗಿ ಸೇರಿ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲ ಕೇಂದ್ರಗಳಲ್ಲಿ ಸಿ.ಸಿ. ಟಿ.ವಿ. ಅಳವಡಿಸಲಾಗಿದ್ದು, ಜಿಲ್ಲಾ ಖಜಾನೆಯಿಂದ ಬಿಗಿ ಭದ್ರತೆಯಲ್ಲಿ ಸಕಾಲದಲ್ಲಿ ಪ್ರಶ್ನೆಪತ್ರಿಕೆ ವಿತರಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಪರೀಕ್ಷಾ ದಿನದಂದು ಕೇಂದ್ರಗಳ ಸುತ್ತಲೂ ಸೆಕ್ಷನ್ 144 ಜಾರಿಗೊಳಿಸಲು ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದರು. ಕಾನೂನು ಉಲ್ಲಂ ಸಿದವರ ಮೇಲೆ ಕ್ರಮ ಜರಗಿಸಲಾಗುವುದು. ಪರೀಕ್ಷೆ ಕುರಿತು ಸುಳ್ಳು ಸುದ್ದಿ, ನಕಲಿ ಪ್ರಶ್ನೆಪತ್ರಿಕೆಗಳನ್ನು ಹರಡುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದರು. ಮಾಧ್ಯಮಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಮುನ್ನ ಶಿಕ್ಷಣ ಇಲಾಖೆಯ ಅಧಿಕಾರಿ ಗಳೊಂದಿಗೆ ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ ತಿಳಿಸಿದರು.
Related Articles
ಪರೀಕ್ಷಾ ಕೇಂದ್ರದೊಳಗಡೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಇದಕ್ಕಾಗಿ ಪ್ರತೀ ಕೇಂದ್ರದಲ್ಲಿ ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸಲಾಗುವುದು. ಜಾಗೃತ ದಳದ ಅಧಿಕಾರಿಗಳು ನಿಯಮಿತವಾಗಿ ಭೇಟಿ, ಪರಿಶೀಲನೆ ನಡೆಸಿ, ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಮತ್ತು ಪರೀಕ್ಷಾ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುವ ಸಿಬಂದಿಗೆ ಅಗತ್ಯ ತರಬೇತಿ ನೀಡುವಂತೆ ಡಿಡಿಪಿಐ ಅವರಿಗೆ ಸೂಚಿಸಿದರು.
Advertisement
ಉತ್ತರ ಪತ್ರಿಕೆ ಇರಿಸಲು ವ್ಯವಸ್ಥೆಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಷಶಯನ ಕಾರಿಂಜ ಮಾಹಿತಿ ನೀಡಿ, ಎಸೆಸೆಲ್ಸಿ ಉತ್ತರ ಪತ್ರಿಕೆಗಳನ್ನು ಕ್ರಿಶ್ಚಿಯನ್ ಪ್ರೌಢಶಾಲೆಯ ಭದ್ರತಾ ಕೊಠಡಿಯಲ್ಲಿ ಇರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸ್ವೀಕರಿಸಲು ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಜಾಗೃತ ದಳದ 2 ತಂಡಗಳನ್ನು ನಿಯೋಜಿಸಲಾಗಿದೆ. ತಹಶೀಲ್ದಾರ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಒಟ್ಟು 3 ತಂಡಗಳು ಪರೀಕ್ಷಾ ಸಮಯದಲ್ಲಿ ಶಾಲೆಗಳಿಗೆ ಭೇಟಿ ನೀಡಲಿವೆ. ಪ್ರತೀ ಕೇಂದ್ರಕ್ಕೂ ವೀಕ್ಷಕರನ್ನು ಮತ್ತು ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಗತ್ಯ ಪೊಲೀಸ್ ಸಿಬಂದಿಯನ್ನು ನಿಯುಕ್ತಿಗೊಳಿಸುವಂತೆ ಜಿಲ್ಲಾಧಿಕಾ ರಿಗಳಿಗೆ ಮನವಿ ಮಾಡಿದರು. ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೆಕರ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಮತ್ತು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.