Advertisement

1404 ಜನರ ಮಾದರಿ ಸಂಗ್ರಹ

07:32 AM May 31, 2020 | Suhan S |

ಯಾದಗಿರಿ: ಕೋವಿಡ್ ವೈರಸ್‌ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 1404 ಜನರ ಮಾದರಿ ಸಂಗ್ರಹಿಸಲಾಗಿದೆ. 786 ನೆಗೆಟಿವ್‌ ವರದಿ ಸೇರಿ ಈವರೆಗೆ 7108 ಮಾದರಿಗಳ ವರದಿ ನೆಗೆಟಿವ್‌ ಬಂದಿದ್ದು, ಇಂದು ಪತ್ತೆಯಾದ 18 ಸೋಂಕಿತರು ಸೇರಿದಂತೆ ಮೇ 30ರವರೆಗೆ 241 ವರದಿ ಪಾಸಿಟಿವ್‌ ಬಂದಿದೆ. ಇನ್ನು 8750 ಮಾದರಿಗಳ ವರದಿ ಬರಬೇಕಿದೆ ಎಂದು ಎಡಿಸಿ ಪ್ರಕಾಶ್‌ ಜಿ.ರಜಪೂತ್‌ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಕೋವಿಡ್‌19 ಖಚಿತಪಟ್ಟ 241 ವ್ಯಕ್ತಿಗಳಲ್ಲಿ 11 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 657 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 1885 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 4 ಕಂಟೇನ್ಮೆಂಟ್‌ ಝೋನ್‌ಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 82 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 61 ಜನರನ್ನು, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 25 ಮತ್ತು ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 143 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 200 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 11,856 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಮೇ 30ರಂದು 1285 ಜನರನ್ನು ಕ್ವಾರಂಟೈನ್‌ ಸೆಂಟರ್‌ಗಳಿಂದ ಬಿಡುಗಡೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next