Advertisement
ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಯಾವುದೇ ಹೊಸ ಹಿಂಸಾಚಾರದ ಘಟನೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸುಮಾರು 1,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
Related Articles
Advertisement
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಮನವಿ ಮಾಡಿದರು ಮತ್ತು ಇಬ್ಬರು ಸಚಿವರಾದ ರಾಜೇಂದ್ರ ಯಾದವ್ ಮತ್ತು ಸುಭಾಷ್ ಗರ್ಗ್ ಅವರನ್ನು ಜೋಧ್‌ಪುರಕ್ಕೆ ಕಳುಹಿಸಿದ್ದಾರೆ.
ಈ ಘರ್ಷಣೆಯು ಗೆಹ್ಲೋಟ್ ಮತ್ತು ಬಿಜೆಪಿ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್, ಬಿಜೆಪಿ ತನ್ನ ಹೈಕಮಾಂಡ್ ಆದೇಶದ ಮೇರೆಗೆ ಗಲಭೆಗೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರನ್ನು ಗುರಿಯಾಗಿಸಿ ಗೆಹ್ಲೋಟ್ ಅವರು “ಶಾಂತಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ” ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಆತಂಕದಲ್ಲಿದೆ. ಆದ್ದರಿಂದ ಅವರು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಹೇಳಿದರು.
“ರಾಜಸ್ಥಾನ ಸರ್ಕಾರವನ್ನು ದೂಷಿಸಲು ಮತ್ತು ಸಾಧ್ಯವಾದಷ್ಟು ಅಸ್ಥಿರತೆಯನ್ನು ಸೃಷ್ಟಿಸಲು ಅವರು ತಮ್ಮ ಹೈಕಮಾಂಡ್‌ನಿಂದ ಸೂಚನೆಗಳನ್ನು ಹೊಂದಿದ್ದಾರೆ” ಎಂದು ಸಿಎಂ ಆರೋಪಿಸಿದ್ದಾರೆ.
ಮಂಗಳವಾರ ಬಿಜೆಪಿ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದೆ. ಪೊಲೀಸರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಗಲಭೆಕೋರರನ್ನು ಬಂಧಿಸದಿದ್ದರೆ ಪಕ್ಷದ ಇತರ ಮುಖಂಡರೊಂದಿಗೆ ಜಲೋರಿ ಗೇಟ್ ವೃತ್ತದಲ್ಲಿ ಧರಣಿ ನಡೆಸುವುದಾಗಿ ಶೇಖಾವತ್ ಬೆದರಿಕೆ ಹಾಕಿದ್ದಾರೆ.
ರಾಜ್ಯ ಸರ್ಕಾರದ ಆಶ್ರಯದಲ್ಲಿ ಕೋಮು ಘಟನೆಗಳು ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಆರೋಪಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಬಲ್ಮುಕುಂದ್ ಬಿಸ್ಸಾ ಅವರ ಪ್ರತಿಮೆಯ ಮೇಲೆ ಸಮಾಜ ವಿರೋಧಿಗಳು ಕೇಸರಿ ಧ್ವಜಗಳನ್ನು ತೆಗೆದುಹಾಕಿದ್ದಾರೆ ಮತ್ತು ಇಸ್ಲಾಮಿಕ್ ಧ್ವಜವನ್ನು ಹಾಕಿದ್ದಾರೆ ಎಂದು ಅವರು ಆರೋಪಿಸಿದರು.