Advertisement

ಮುಂದುವರಿದ ಕೋವಿಡ್ ಕಳವಳ: ಹಾಸನ ಜಿಲ್ಲೆಯಲ್ಲಿ144 ಜನರಿಗೆ ಕೋವಿಡ್ ಸೋಂಕು ದೃಢ

03:53 PM Aug 01, 2020 | keerthan |

ಹಾಸನ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು ಜಿಲ್ಲೆಯಲ್ಲಿ ಮತ್ತೆ 144 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

Advertisement

ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆ್ಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಕೋವಿಡ್-19 ಸೋಂಕಿನ ಕಾರಣದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇದರಿಂದ ಸಾವನ್ನಪ್ಪಿದ ಒಟ್ಟು ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.

ಹಾಸನ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2275 ಕ್ಕೆ ಏರಿಕೆಯಾಗಿದೆ. ಶುಕ್ರವಾರ ಜಿಲ್ಲೆಯಲ್ಲಿ ಭರ್ತಿ ನೂರು ಜನರಿಗೆ ಸೋಂಕು ದೃಢವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next