Advertisement
ಬೆಂಗಳೂರು ನಗರ ಜಿಲ್ಲೆಯಲ್ಲಿ 10,800, ದ.ಕ. 583, ಮೈಸೂರು 562, ತುಮಕೂರು 332, ಮಂಡ್ಯ 263, ಉಡುಪಿ 250, ಧಾರವಾಡ 178 ಪ್ರಕರಣಗಳು ದಾಖಲಾಗಿವೆ. ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ನಗರದ ಮೂವರು, ಕೋಲಾರ ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರಂತೆ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ. 1,356 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 73,260ಕ್ಕೆ ಏರಿಕೆಯಾಗಿದೆ.
ಚನ್ನಗಿರಿ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದ ಇಂದಿರಾ ಗಾಂ ಧಿ ವಸತಿ ಶಾಲೆ ಪ್ರಾಂಶುಪಾಲರ ಸಹಿತ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಸತಿ ಶಾಲೆಯಲ್ಲಿ 246ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಕೆಲವು ದಿನಗಳ ಹಿಂದೆ ಮಕ್ಕಳಲ್ಲಿ ಶೀತ, ನೆಗಡಿ, ಜ್ವರ, ಕೆಮ್ಮಿನ ಲಕ್ಷಣಗಳು ಕಂಡು ಬಂದಿವೆ. ತತ್‌ಕ್ಷಣ ಹಾಸ್ಟೆಲ್ ಸಿಬಂದಿ ಮಕ್ಕಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ರ್ಯಾಪಿಡ್ ಟೆಸ್ಟ್ ಮಾಡಿಸಿದಾಗ ಪ್ರಾಂಶುಪಾಲರ ಸಹಿತ ಅಡುಗೆ ಸಿಬಂದಿ, ಶಿಕ್ಷಕರು ವಿದ್ಯಾರ್ಥಿಗಳು ಸೇರಿ 46 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಶಿರಾ: 17 ಮಕ್ಕಳಿಗೆ ಸೋಂಕು
ಶಿರಾ: ನಗರದ ಹೊರ ವಲಯದಲ್ಲಿನ ಅಂಬೇಡ್ಕರ್ ವಸತಿ ಶಾಲೆಯ (ಪ್ರೀ ಮೆಟ್ರಿಕ್) 17 ಮಕ್ಕಳಿಗೆ ಕೊರೊನಾ ದೃಢವಾಗಿದ್ದು, ವಿದ್ಯಾರ್ಥಿಗಳಿಗೆ ಸ್ಥಳದಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
Related Articles
Advertisement
ಸಚಿವರಿಗೆ ಸೋಂಕುಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸರಕಾರದ ಹಲವು ಸಚಿವ
ರಿಗೆ ಕೊವಿಡ್ ಸೋಂಕು ತಗಲಿದೆ. ಬೊಮ್ಮಾಯಿ ಮಂಗಳವಾರ ಮಣಿಪಾಲ ಆಸ್ಪತ್ರೆಗೆ ತೆರಳಿ ಸಾಮಾನ್ಯ ಚಿಕಿತ್ಸೆ ಪಡೆದು ಮತ್ತೆ ಮನೆಗೆ ಮರಳಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ದೃಢ ಪಟ್ಟಿರುವುದರಿಂದ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಪುತ್ರ ಭರತ್ ಬೊಮ್ಮಾಯಿ ಹಾಗೂ ಅವರ ಪತ್ನಿಗೂ ಕೋವಿಡ್ ದೃಢ ಪಟ್ಟಿದ್ದು, ಅವರೂ ಚಿಕಿತ್ಸೆ ಪಡೆಯುತ್ತಿದ್ದಾರೆ.