Advertisement

ರಾಜ್ಯದಲ್ಲಿ ಇಂದು 1,464 ಜನರಲ್ಲಿ ಕೋವಿಡ್ ಸೋಂಕು ಪತ್ತೆ

08:35 PM Jul 20, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿಂದು (ಮಂಗಳವಾರ) 1,464 ಜನರಿಗೆ ಕೋವಿಡ್ ಸೋಂಕು ತಗುಲಿರುವುದಾಗಿ ವರದಿಯಾಗಿದೆ. ಈ ಪೈಕಿ 29 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 2,706 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Advertisement

ಸದ್ಯ ರಾಜ್ಯದಲ್ಲಿ 26,256 ಕೋವಿಡ್ ಸೋಂಕಿನ ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಇದುವರೆಗೆ 28,86,702 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇದುವರೆಗೂ ಕೋವಿಡ್ ನಿಂದ ಸತ್ತವರ ಸಂಖ್ಯೆ 36,226ಕ್ಕೆ ಏರಿಕೆಯಾಗಿದೆ.

ಇನ್ನು ಬೆಂಗಳೂರಿನಲ್ಲಿಂದು ಇಂದು 352 ಕೋವಿಡ್ ಪ್ರಕರಣಗಳು ವರದಿಯಾಗಿವೆ.  5 ಜನರು ಸಾವನ್ನಪ್ಪಿದ್ದು,  10,046 ಸಕ್ರಿಯ ಪ್ರಕರಣಗಳಿವೆ. ಅಲ್ಲದೆ  1,110 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next