Advertisement
ವಲಯ ಕಚೇರಿ ಸಹಾಯಕ ಆಯುಕ್ತರು ವಾರ್ಡ್ ಸದಸ್ಯರ ಸಹಕಾರ ಪಡೆದುಕೊಂಡು ವಾರ್ಡ್‌ಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಜಾಗೃತಿ ಸಭೆಗಳನ್ನು ಆಯೋಜಿಸಬೇಕು ಎಂದರು. ಡೆಂಘೀ ಕುರಿತು ಜಾಗೃತಿ ಮೂಡಿಸಲು ಕಸ ಸಂಗ್ರಹ ವಾಹನಗಳಲ್ಲಿ ಆರೋಗ್ಯ ಇಲಾಖೆ ಮಾಡಿದ ಧ್ವನಿಸುರಳಿ ಪ್ರಸಾರ ಮಾಡಲಾಗುವುದು.
Related Articles
Advertisement
ಗುತ್ತಿಗೆದಾರರ ಭದ್ರತಾ ಠೇವಣಿ ಜಪ್ತಿ: ರಸ್ತೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಗುತ್ತಿಗೆ ಅವಧಿ ಪೂರ್ಣಗೊಳ್ಳದ ರಸ್ತೆಗಳ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗುತ್ತಿಗೆದಾರರ ಭದ್ರತಾ ಠೇವಣಿ ಜಪು¤ ಮಾಡಿಕೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಎಚ್ಚರಿಕೆ ನೀಡಿದರು.
ರಸ್ತೆಗಳಲ್ಲಿನ ಗುಂಡಿಗಳಿಂದಾಗಿ ಸಂಚರಿಸುವುದು ದುಸ್ತರವಾಗಿದೆ. ಕೂಡಲೇ ಗುತ್ತಿಗೆದಾರರು ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಉಳಿದ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಟ್ರಕ್‌ಗಳಲ್ಲಿ ಕಾಂಕ್ರೀಟ್, ಸಕ್ಕರ್, ರೋಲರ್ ಗಳನ್ನು ಬಳಸಿ ತ್ವರಿತ ಗತಿಯಲ್ಲಿ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.
ಮಹಾಪೌರ ಡಿ.ಕೆ. ಚವ್ಹಾಣ ಮಾತನಾಡಿ, ನಗರದ ಹಲವು ರಸ್ತೆಗಳಲ್ಲಿ ತೆಗ್ಗುಗಳಿಂದಾಗಿ ಸಂಚಾರ ಕಷ್ಟವಾಗುತ್ತಿದೆ. ಒಂದೆರಡು ದಿನಗಳಿಂದ ಮಳೆ ಬೀಳುವ ಪ್ರಮಾಣ ಕಡಿಮೆಯಾಗಿರುವುದರಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಮುಂದಾಗಬೇಕು ಎಂದರು. ಪಾಲಿಕೆ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಪಾಲ್ಗೊಂಡಿದ್ದರು.