Advertisement
ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇ. 7.5 ಮೀಸಲಾತಿಗೆ ಒತ್ತಾಯಿಸಿ ಕಳೆದ 152 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸುತ್ತಿರುವ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೋರಾಟ ಬೆಂಬಲಿಸಿ ನಗರದ ಒನಕೆ ಓಬವ್ವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 51 ಶಾಸಕರಿದ್ದಾರೆ. ದೇಶದಲ್ಲಿ 151 ಸಂಸದರಿದ್ದಾರೆ. ಎಲ್ಲರೂ ಧ್ವನಿ ಎತ್ತಬೇಕಾಗಿದೆ. ಒಳ ಜಾತಿಗಳೇನೇ ಇದ್ದರೂ, ಮೀಸಲಾತಿ ವಿಚಾರ ಬಂದಾಗ ಎಲ್ಲರೂ ಒಗ್ಗಟ್ಟಾಗಬೇಕು ಎಂದು ಕರೆ ನೀಡಿದರು.
Related Articles
Advertisement
ಮೇಲ್ವರ್ಗದವರು ಕೇಳದಿದ್ದರು ಶೇ. 10ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ಪ್ರಸನ್ನಾನಂದ ಸ್ವಾಮೀಜಿ ಕಳೆದ 152 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕಾಗಿ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದರೂ ಮೋಸ ಮಾಡುವ ಪಕ್ಷಗಳಿಗೆ ಮಣೆ ಹಾಕುವ ಕೆಲಸ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದು ಹೇಳಿದರು.
ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ವಾಲ್ಮೀಕಿ ಶ್ರೀಗಳು 152 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ರಾಜನಹಳ್ಳಿಯಿಂದ ರಾಜಧಾನಿವರೆಗೂ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ಅಧಿವೇಶನದಲ್ಲಿ ಮೂರು ಬಾರಿ ಪ್ರತಿಭಟನೆ ನಡೆಸಿದ್ದೇವೆ, ಧರಣಿ ಮಾಡಿದ್ದೇವೆ. ಜನಸಂಖ್ಯೆಗನುಗುಣವಾಗಿ ಮೀಸಲಾತಿ ಸಿಗಬೇಕು ಎಂದು ಒತ್ತಾಯಿಸಿದ್ದೇವೆ. ಆದರೂ ಬಿಜೆಪಿ ನೇತೃತ್ವದ ಸರ್ಕಾರ ನಮಗೆ ಮೋಸ ಮಾಡುತ್ತಿದೆ. ಧರ್ಮದ ವಿಚಾರವನ್ನು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಬಸವಪ್ರಭು ಕೇತೇಶ್ವರ ಸ್ವಾಮೀಜಿ ಮಾತನಾಡಿದರು.ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಬಿ. ಕಾಂತರಾಜ್, ಮುಖಂಡರಾದ ಹರ್ತಿಕೋಟೆ ವೀರೇಂದ್ರಸಿಂಹ, ಡಿ. ಗೋಪಾಲಸ್ವಾಮಿ ನಾಯಕ, ಕೆ.ಪಿ. ಸಂಪತ್‌ಕುಮಾರ್, ಫಾ| ಎಂ.ಎಸ್. ರಾಜು, ನಗರಸಭೆ ಸದಸ್ಯರಾದ ವೆಂಕಟೇಶ್, ದೀಪು, ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ, ಸಿ.ಟಿ. ರಾಜೇಶ್, ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಎಚ್. ಅಂಜಿನಪ್ಪ, ದಲಿತ ಮುಖಂಡ ಡಿ.ಟಿ. ರಾಜಗಿರಿ, ಬಾಳೆಕಾಯಿ ಶ್ರೀನಿವಾಸ್, ಜಿಪಂ ಮಾಜಿ ಸದಸ್ಯರಾದ ಆರ್ .ನರಸಿಂಹರಾಜು, ಬಿ.ಪಿ.ಪ್ರಕಾಶ್‌ಮೂರ್ತಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಪರಿಶಿಷ್ಟ ಜಾತಿಗೆ ಶೇ. 17 ಹಾಗೂ ಪಂಗಡದ ಶೇ. 7.5ರಷ್ಟು ಮೀಸಲಾತಿ ಹೆಚ್ಚಳ ಮಾಡಲು ಕೇಳುತ್ತಿದ್ದೇವೆ. ನಮ್ಮ ಸಂವಿಧಾನಬದ್ಧ ಹಕ್ಕನ್ನು ಕೊಡಿ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ತಾತ್ಸಾರ ಭಾವನೆ ಸರಿಯಲ್ಲ. ನಮ್ಮ ತಾಳ್ಮೆ ಪರೀಕ್ಷೆ ಮಾಡದೇ ಮೀಸಲಾತಿ ಕಲ್ಪಿಸಿ ವಾಲ್ಮೀಕಿ ಶ್ರೀಗಳ ಧರಣಿ ಅಂತ್ಯವಾಗುವಂತೆ ನೋಡಿಕೊಳ್ಳಿ.
ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ
ಆಳುವ ಸರ್ಕಾರಗಳು ಯಾವುದೇ ಇರಬಹುದು. ಆದರೆ ಹೋರಾಟ ಪರಿಪಕ್ವವಾಗಿದ್ದಾಗ ಮಾತ್ರ ಧರಣಿ, ಚಳವಳಿಗಳಿಗೆ ಯಶಸ್ಸು ಸಿಗುತ್ತದೆ. ರಾಜ್ಯದಲ್ಲಿ ಶೇ. 30ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿದ್ದೇವೆ. ತಾಳ್ಮೆ ಕೆಣಕಿದರೆ ಮುಂದಿನ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ವಿಳಂಬ ನೀತಿ ಅನುಸರಿಸಿದಂತೆಲ್ಲಾ ವಿರೋಧಗಳ ಶಕ್ತಿ ಹೆಚ್ಚುತ್ತದೆ. ನ್ಯಾ| ನಾಗಮೋಹನ ದಾಸ್ ವರದಿ ಸ್ಪಷ್ಟ, ನಿಖರ, ನೇರವಾಗಿದೆ. ಪರಿಶೀಲಿಸುವ ಅಗತ್ಯವಿಲ್ಲ. ಸರ್ಕಾರ ಮೀಸಲಾತಿ ಹೆಚ್ಚಿಸಲಿ.ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ