Advertisement

ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ ನ ಗೋಡೆ ಕುಸಿದು ಬಿದ್ದು 4ಮಕ್ಕಳು ಸೇರಿದಂತೆ 15 ಮಂದಿ ಸಾವು

10:06 AM Jul 01, 2019 | Nagendra Trasi |

ಪುಣೆ: ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೆಸಿಡೆನ್ಶಿಯಲ್ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ನಾಲ್ಕು ಮಕ್ಕಳು, ಮಹಿಳೆ ಸೇರಿದಂತೆ 15 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ.

Advertisement

ಪುಣೆಯ ಕೋಂಡಾವಾ ಪ್ರದೇಶದಲ್ಲಿ ಅಪಾರ್ಟ್ ಮೆಂಟ್ ಗೋಡೆ ಕುಸಿದು ಬಿದ್ದ ಹೊಡೆತಕ್ಕೆ ಹಲವಾರು ಕಾರುಗಳು ಅವಶೇಷಗಳಡಿಯಲ್ಲಿ ಸಿಲುಕಿವೆ. ಅಪಾರ್ಟ್ ಮೆಂಟ್ ಗೋಡೆ ಮುಂಭಾಗದ ಜಾಗದಲ್ಲಿನ ಶೆಡ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಕುಸಿದು ಬಿದ್ದಿತ್ತು. ಅಲ್ಲದೇ ಪಾರ್ಕಿಂಗ್ ಶೆಡ್ ಮೇಲೆಯೂ ಬಿದ್ದ ಪರಿಣಾಮ ಕಾರುಗಳು ಜಖಂಗೊಂಡಿದ್ದವು.

15 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್ ನ ರಕ್ಷಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಅವಶೇಷಗಳಡಿ ಸಿಲುಕಿದವರನ್ನು ಹೊರತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾರ್ಟ್ ಮೆಂಟ್ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next