Advertisement
ಮಾಘ ಪೂರ್ಣಿಮೆಯ ಶುಭ ದಿನದಂದು ಪುಣ್ಯಸ್ನಾನಕ್ಕಾಗಿ ಗಂಗಾನದಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಗ್ರಾಮಸ್ಥರು ತೆರಳುತ್ತಿದ್ದರು ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ನ ಹಿಂಬದಿ ಟ್ರಾಲಿ ಕೆರೆಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ಹಲವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಕಾಸ್ಗಂಜ್‌ನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ ಐವತ್ತು ಸಾವಿರ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತ ಮತ್ತು ಸಮರ್ಪಕ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಕಸ್ಗಂಜ್ ಜಿಲ್ಲೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ರಕ್ಷಣಾ ಕಾರ್ಯಾಚರಣೆಗೂ ಬೇಕಾದ ಅಗತ್ಯ ವ್ಯವಸ್ಥೆಯನ್ನು ಮಾಡುವಂತೆ ಸೂಚಿಸಿದ್ದಾರೆ.
Related Articles
Advertisement