ಪುರಿ: ಇಲ್ಲಿನ ಪುರಿ ಭಗವಾನ್ ಜಗನ್ನಾಥ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಪಟಾಕಿಗಳು ಸ್ಫೋಟಗೊಂಡು ಹಲವಾರು ಭಕ್ತರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಗೊಂಡಿರುವ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದುಃಖ ವ್ಯಕ್ತಪಡಿಸಿದ್ದು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಗಾಯಗೊಂಡವರ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಅವರು ಹೇಳಿದರು.
ಒಡಿಶಾದ ಪುರಿಯಲ್ಲಿ ಬುಧವಾರ ರಾತ್ರಿ ಭಗವಾನ್ ಜಗನ್ನಾಥನ ಚಂದನ್ ಜಾತ್ರಾ ಉತ್ಸವದ ನಡೆಯುತ್ತಿದ್ದ ವೇಳೆ ಭಕ್ತ ಸಮೂಹ ಪಟಾಕಿ ಸಿಡಿಸಿ ಹಬ್ಬ ಆಚರಿಸುತ್ತಿದ್ದರು ಈ ವೇಳೆಬೆಂಕಿಯ ಕಿಡಿ ಪಟಾಕಿಯ ರಾಶಿಗೆ ಬಿದ್ದು ಪಟಾಕಿಗಳು ಸ್ಪೋಟಗೊಂಡ ಪರಿಣಾಮ ಸುಮಾರು ಹದಿನೈದು ಭಕ್ತರು ಗಾಯಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ಸವದ ವೇಳೆ ನೂರಾರು ಭಕ್ತರು ಅಲ್ಲಿ ನೆರೆದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್