Advertisement

15 JDS ಶಾಸಕರು ಕಾಂಗ್ರೆಸ್‌ ಸೇರ್ಪಡೆಗೆ ಸಿದ್ದವಾಗಿದ್ದಾರೆ:ಜಮೀರ್‌

03:30 PM Apr 23, 2017 | Team Udayavani |

ಮಾಗಡಿ : ಮುಂದಿನ ವಿಧಾನಸಭಾ ಚುನಾವಣೆಯ ಒಳಗೆ 15 ಮಂದಿ ಹಾಲಿ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್‌ ಬಂಡಾಯ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಭಾನುವಾರ ಹೇಳಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ನಾನು ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತೇನೆ. 100 ಶೇಕಡಾ ನನಗೆ ಕಾಂಗ್ರೆಸ್‌ ಟಿಕೇಟ್‌ ಖಾತ್ರಿಯಾಗಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರೇ ಒಪ್ಪಿಗೆ ಸೂಚಿಸಿದ್ದಾರೆ ಎಂದರು. 

ಮುಂದಿನ ಚನಾವಣೆಯ ವೇಳೆ ಕಾಂಗ್ರೆಸ್‌ -ಜೆಡಿಎಸ್‌ ಹೊಂದಾಣಿಕೆ ಸಾಧ್ಯವಿಲ್ಲ. ಹೊಂದಾಣಿಕೆಯಾದರೂ ನಾನು ಕಾಂಗ್ರೆಸ್‌ನಿಂದಲೇ ಸ್ಫರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಮರಳುವುದಿಲ್ಲ ಎಂದರು. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next