Advertisement

ಗುಜರಾತ್‌ನ 20 ಕೈ ಶಾಸಕರು ಪಕ್ಷ ತೊರೆಯಲಿದ್ದಾರೆ: ಅಲ್ಪೇಶ್‌ ಬಾಂಬ್‌

09:59 AM May 29, 2019 | Team Udayavani |

ಅಹಮದಾಬಾದ್‌: ಗುಜರಾತ್‌ನ 15 ರಿಂದ 20 ಮಂದಿ ಕಾಂಗ್ರೆಸ್‌ ಶಾಸಕರು ಪಕ್ಷ ತೊರೆಯಲು ಮುಂದಾಗಿದ್ದಾರೆ ಎಂದು ಮಾಜಿ ಕಾಂಗ್ರೆಸಿಗ ಮತ್ತು ಓಬಿಸಿ ನಾಯಕ ಅಲ್ಪೇಶ್‌ ಠಾಕೂರ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

Advertisement

ಕಾಂಗ್ರೆಸ್‌ಗೆ ನಾಯಕತ್ವದ ಕೊರತೆ ಇದೆ.ಇದೇ ರೀತಿ ಮುಂದುವರಿದರೆ ಇನ್ನು 10 ವರ್ಷಗಳ ಕಾಲ ಕಾಂಗ್ರೆಸ್‌ ಅಧಿಕಾರದಿಂದ ದೂರ ಉಳಿಯಬೇಕಾಗುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಪ್ರತಿ ಗುಜರಾತ್‌ ಪ್ರಜೆಗೂ ಗೊತ್ತಿದೆ. ಎಲ್ಲರಿಗೂ ಅವರ ಬಗ್ಗೆ ಗೌರವವಿದೆ. ನಾನು ಅವರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ ಎಂದರು.

ನನಗೆ ಗಾಂಧಿ ಕುಟುಂಬ ಮತ್ತು ರಾಹುಲ್‌ ಗಾಂಧಿ ಅವರೊಂದಿಗೆ ಉತ್ತಮ ಬಾಂಧವ್ಯ ಇದೆಯಾದರೂ ನಾಯಕತ್ವದ ವಿಚಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಟಿಯಲ್ಲ. ಇದಕ್ಕೆ ನನ್ನ ಪ್ರಮಾಣಪತ್ರದ ಅಗತ್ಯವೂ ಇಲ್ಲ ಎಂದರು.

ಠಾಕೂರ್‌ ಅವರು ಸೋಮವಾರ ಗುಜರಾತ್‌ ಉಪ ಮುಖ್ಯಮಂತ್ರಿ ನಿತಿನ್‌ ಪಟೇಲ್‌ ಅವರನ್ನು ಭೇಟಿಯಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next