ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮದುವೆಯ ದಿಬ್ಬಣ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ.
ಇಸ್ಲಾಮಾಬಾದ್‌ನಿಂದ ಲಾಹೋರ್‌ಗೆ ತೆರಳುತ್ತಿದ್ದ ಬಸ್, ಲಾಹೋರ್‌ನಿಂದ 240 ಕಿಮೀ ದೂರದಲ್ಲಿರುವ ಕಲ್ಲರ್ ಕಹಾರ್ ಸಾಲ್ಟ್ ರೇಂಜ್ ಪ್ರದೇಶದಲ್ಲಿ ಬಸ್ ನ ಬ್ರೇಕ್ ಫೈಲ್ ಆಗಿ ಅಪಘಾತಗೊಂಡಿದೆ.
ಬಸ್ ಪಲ್ಟಿಯಾಗುವ ಮುನ್ನ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು, ನಂತರ ಆಯತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಕಂದಕಕ್ಕೆ ಉರುಳಿದೆ.
ಬಸ್ ನಲ್ಲಿ ಇದ್ದ ಪ್ರಯಾಣಿಕರು ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬ್ರೇಕ್ ವೈಫಲ್ಯ ಆಗಿದ್ದೇ ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Related Articles
ಗಾಯಾಳುಗಳನ್ನು ಅವಳಿ ನಗರಗಳಾದ ರಾವಲ್ಪಿಂಡಿ ಮತ್ತು ಇಸ್ಲಾಮಾಬಾದ್‌ನ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಅವರಲ್ಲಿ 11 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ.
ಇದನ್ನೂ ಓದಿ:ಹಣದುಬ್ಬರ ನಿಯಂತ್ರಣಕ್ಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ: ನಿರ್ಮಲಾ ಸೀತಾರಾಮನ್
ಅಪಘಾತದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ವಿಷಾದ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ತಿಂಗಳು, ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಬಸ್ ಕಂದಕಕ್ಕೆ ಬಿದ್ದು ಕನಿಷ್ಠ 41 ಜನರು ಮೃತಪಟ್ಟಿದ್ದರು.