ಬೆಂಗಳೂರು: ಜಂಕ್ ಫುಡ್ ಸೇರಿದಂತೆ ವಿವಿಧ ರೀತಿಯ ಅನಾರೋಗ್ಯಕರ ಆಹಾರ ಸೇವೆಯಿಂದ ನಗರದ ಖಾಸಗಿ ಶಾಲೆಯ ಶೇ.15ರಷ್ಟು ಮಕ್ಕಳು ದೃಷ್ಟಿ ದೋಷ ಮತ್ತು ಶೇ.21ರಷ್ಟು ಮಕ್ಕಳು ಅತಿಯಾದ ಬೊಜ್ಜಿನಿಂದ ಬಳಲುತ್ತಿದ್ದಾರೆ ಎಂಬ ಅಂಶ ಖಾಸಗಿ ಅಧ್ಯಯನ ಒಂದರಿಂದ ತಿಳಿದುಬಂದಿದೆ.
ರೈಬೋ ಹಾಸ್ಪಿಟಲ್ಸ್ ಮತ್ತು ಅಡ್ರೆಸ್ ಹೆಲ್ತ್ ನಡೆಸಿದ ಅಧ್ಯಯನದಲ್ಲಿ ಕೆಲ ಪ್ರಮುಖ ಅಂಶಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಜನವರಿಯಿಂದ ಅಕ್ಟೋಬರ್‌ವರೆಗೆ ನಗರದ 20ಕ್ಕೂ ಹೆಚ್ಚು ಖಾಸಗಿ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಅಧ್ಯಯನ ನಡೆಸಿದ ವರದಿಯನ್ನು ಬಿಡುಗಡೆ ಮಾಡಿದು,ª ಇದರಲ್ಲಿ ಪುಟ್ಟ ಮಕ್ಕಳು ಅನುಭವಿಸುತ್ತಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ವಿಸ್ತೃತವಾದ ಮಾಹಿತಿ ಇದೆ.
ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುತ್ತಿರುವ (ಪ್ರಾಥಮಿಕ ಮತ್ತು ಪ್ರೌಢ ಶಾಲೆ) ಶೇ.9ರಷ್ಟು ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆಯಿದ್ದು, ಶೇ.12ರಷ್ಟು ಮಕ್ಕಳು ಅತಿಯಾದ ತೂಕದಿಂದ ಬಳಲುತ್ತಿದ್ದಾರೆ. ಹೆಚ್ಚು ಆದಾಯ ಹೊಂದಿರುವ ಪೋಷಕರ ಮಕ್ಕಳಲ್ಲಿ ಈ ಸಮಸ್ಯೆ ಕಂಡುಬಂದಿರುವುದು ಗಮನಾರ್ಹ. ದೃಷ್ಟಿ ಸಮಸ್ಯೆಯಿಂದ ಮಕ್ಕಳ ಬಳಲಿಕೆ: ಮತ್ತೂಂದು ಆತಂಕದ ಸಂಗತಿ ಏನೆಂದರೆ, ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಶೇ.15ರಷ್ಟು ಮಕ್ಕಳು ದೃಷ್ಟಿ ದೋಷದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಮಕ್ಕಳ ಎಳೆಯ ವಯಸ್ಸಿನಲ್ಲೇ ಪೋಷಕರು ಎಚ್ಚರಿಕೆ ವಹಿಸುವಂತೆ ವರದಿಯಲ್ಲಿ ತಿಳಿಸಲಾಗಿದೆ.
ಜತಗೆ ಶೇ.3.4ರಷ್ಟು ಮಕ್ಕಳಲ್ಲಿ ರಕ್ತ ಹೀನತೆ ಲಕ್ಷಣಗಳು ಕಂಡು ಬಂದಿದ್ದು, ಶೇ.30ರಷ್ಟು ಮಕ್ಕಳು ಹಲ್ಲು ನೋವಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಡ್ರೆಸ್ ಹೆಲ್ತ್‌ನ ಹಿರಿಯ ಅಧಿಕಾರಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕಡಿಮೆ ದೈಹಿಕ ಚಟುವಟಿಕೆಗಳಿಂದ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಅಲ್ಲದೆ ಹಲವು ಮಕ್ಕಳು ಪತ್ತೆಯಾಗದ ಶ್ರವಣ ದೋಷ ಸಮಸ್ಯೆಯಿಂದ ಬಳುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.