ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ಚಿಕ್ಕಪೇಟೆ (ಶೆಟ್ಟರಬೀದಿ)ಯಲ್ಲಿ ನೇಕಾರಿಕೆ ಉದ್ಯಮಿಯೊಬ್ಬರಿಗೆ ಭಾನುವಾರ ಕೋವಿಡ್ -19 ದೃಢಪಟ್ಟಿದ್ದು, ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಹಾಗೆಯೇ ರಾಜೀವ್‌ಗಾಂಧಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬರೊ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಿಗೆ ಕೋವಿಡ್-19 ದೃಢಪಟ್ಟಿದೆ.
ಹೀಗಾಗಿ ಈ ಪ್ರದೇಶವನ್ನು ಕಂಟೈನ್ ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಕೋವಿಡ್-19 ದೃಢಪಟ್ಟಿರುವ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲ ರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಗಂಟಲ ದ್ರವ ಪರೀಕ್ಷೆಗೆ ಪಡೆದು ಪ್ರಯೋ ಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ ತಿಳಿಸಿದ್ದಾರೆ.
ಚಿಕ್ಕಪೇಟೆಯಲ್ಲಿ ಭಾನುವಾರ ಕೋವಿಡ್ -19 ದೃಢಪಟ್ಟಿರುವ ವ್ಯಕ್ತಿ ರೇಷ್ಮೆ ಬಟ್ಟೆ ವ್ಯಾಪಾರಕ್ಕಾಗಿ ಪ್ರತಿ ನಿತ್ಯ ಬೆಂಗಳೂರಿಗೆ ಹೋಗಿ ಬರುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೆ ಜ್ವರ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಕೋವಿಡ್ 19 ವೈರಸ್ ಇರುವುದು ದೃಢಪಟ್ಟಿದೆ. ರಾಜೀವ್ ಗಾಂಧಿ ಬಡಾವಣೆಯ ನಿವಾಸಿಯೊಬ್ಬರು ಹೃದಯದ ಸಮಸ್ಯೆ ನಿಮಿತ್ತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ಭಾನುವಾರ ಬೆಳಿಗ್ಗೆ ಮೃತ ವ್ಯಕ್ತಿಯ ಗಂಟಲ ದ್ರವದ ವರದಿ ಬಂದಿದ್ದು, ಕೋವಿಡ್-19 ಇದ್ದದ್ದು ದೃಢಪಟ್ಟಿದೆ. ಹೀಗಾಗಿ ಮೃತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪಕರ್ದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.ವ್ಯಕ್ತಿಯೊಬ್ಬರು ಮೃತಪಟ್ಟ ಪ್ರದೇಶದಲ್ಲಿ ಕೋವಿಡ್ 19 ಸೋಂಕು ಹರ ಡದಂತೆ ಅಗತ್ಯವಿರು ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಸುಣಗಾರ್ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರ ಬದಲಾವಣೆ: ಚಿಕ್ಕಪೇಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್ -19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜೂ.29 ರಂದು ಈ ಪ್ರದೇಶದ ಎಂಎಬಿಎಲ್ ಪ್ರೌಢ ಶಾಲೆಯಲ್ಲಿ ನಡೆಯಬೇಕಿದ್ದ ಎಸ್‌ಎಸ್ ಎಲ್‌ಸಿ ಪರೀಕ್ಷೆಯನ್ನು ರೋಜಿಪುರದ ಕಾರ್ಮಲ್ ಜ್ಯೋತಿ ಪ್ರೌಢಶಾಲೆಗೆ ವರ್ಗಾ ಯಿಸಲಾಗಿದೆ. ರಾಜೀವ್‌ಗಾಂಧಿ ಬಡಾ ವಣೆಯ ಪ್ರದೇಶದಲ್ಲಿರುವ 6 ಜನ ಎಸ್ ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಬಿಇಒ ಬೈಯ್ಯಪ್ಪರೆಡ್ಡಿ ತಿಳಿಸಿದ್ದಾರೆ.