Advertisement

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 15 ವರ್ಷ ಜೈಲು

01:31 AM Oct 28, 2021 | Team Udayavani |

ಮಂಗಳೂರು: ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣವೊಂದರ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್‌ ಅವರು 15 ವರ್ಷ ಕಠಿನ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪಿ.ಜೆ. ಜೇಕಬ್‌ ಶಿಕ್ಷೆಗೊಳಗಾದವನು. ಅಪರಾಧಿಯು 2015ರ ಫೆಬ್ರವರಿಯಲ್ಲಿ ಶಾಲೆಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದ ಪರಿಶಿಷ್ಟ ಪಂಗಡದ ಬಾಲಕಿಯನ್ನು ಬಲಾತ್ಕಾರವಾಗಿ ತಡೆದು ನಿಲ್ಲಿಸಿ ಅತ್ಯಾಚಾರವೆಸಗಿದ್ದ. ಅಲ್ಲದೆ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನದಿಗೆ ಹಾಕಿ ಕೊಲೆ ಮಾಡುವುದಾಗಿ ಬೆದರಿಸಿದ್ದ. ಅನಂತರ ಕೂಡ ಬಾಲಕಿ ಶಾಲೆಯಿಂದ ಮನೆಗೆ ಬರುವಾಗ ತಡೆದು ಪಕ್ಕದ ರಬ್ಬರ್‌ ತೋಟಕ್ಕೆ ಬಲಾತ್ಕಾರವಾಗಿ ಕರೆದೊಯ್ದು ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಡಿಎನ್‌ಎ ಪರೀಕ್ಷೆಯಲ್ಲಿ ಬಾಲಕಿಯ ಗರ್ಭಕ್ಕೆ ಪಿ.ಜೆ. ಜೇಕಬ್‌ ಕಾರಣ ಎನ್ನುವುದು ದೃಢಪಟ್ಟಿತ್ತು. ಎಎಸ್‌ಪಿ ರಾಹುಲ್‌ ಕುಮಾರ್‌ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ:5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಅತ್ಯಾಚಾರ ಪ್ರಕರಣಕ್ಕೆ 6 ವರ್ಷ ಕಠಿನ ಸಜೆ, ಒಂದು ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಕಠಿಣ ಸಜೆ, ಬಲವಂತವಾಗಿ ತಡೆದು ನಿಲ್ಲಿಸಿರುವುದಕ್ಕೆ 500 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 15 ದಿನ ಸಜೆ, ಕೊಲೆ ಬೆದರಿಕೆ ಹಾಕಿರುವುದಕ್ಕೆ 6 ತಿಂಗಳು ಕಠಿನ ಸಜೆ, 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಒಂದು ತಿಂಗಳು ಹೆಚ್ಚುವರಿ ಕಠಿನ ಸಜೆ, ಪೋಕ್ಸೊ ಕಾಯಿದೆಯಡಿ 15 ವರ್ಷ ಕಠಿನ ಸಜೆ ಮತ್ತು ಒಂದು ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ವರ್ಷ ಕಠಿನ ಸಜೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ 2 ವರ್ಷ ಕಠಿನ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಹೆಚ್ಚುವರಿ ಸಜೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next