Advertisement

ಮಾಲಿನ್ಯ ತಡೆಗೆ ಕ್ರಮ; ಬಿಹಾರದಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳ ಸಂಚಾರಕ್ಕೆ ನಿಷೇಧ

09:18 AM Nov 06, 2019 | Team Udayavani |

ನವದೆಹಲಿ: ವಾಯು ಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಾಟ್ನ ಹಾಗೂ ಬಿಹಾರದ ಇತರ ನಗರಗಳಲ್ಲಿ 15 ವರ್ಷಗಳಷ್ಟು ಹಳೆಯ ಸರ್ಕಾರಿ ಹಾಗೂ ಖಾಸಗಿ ವಾಹನಗಳ ಸಂಚಾರವನ್ನು ರಾಜ್ಯ ಸರ್ಕಾರ ಸೋಮವಾರ ನಿಷೇಧಿಸಿ ಆದೇಶ ಹೊರಡಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.

Advertisement

ಬಿಹಾರದ ಕೆಲವು ಜಿಲ್ಲೆಗಳಲ್ಲಿ ವಾಯು ಮಾಲಿನ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿದ ನಂತರ ಈ ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ತಿಳಿಸಿದ್ದಾರೆ. ಈ ಆದೇಶ ಮಂಗಳವಾರದಿಂದ ಜಾರಿಗೊಳ್ಳಲಿದೆ ಎಂದು ಹೇಳಿದರು.

ಬಿಹಾರ ರಾಜ್ಯಾದ್ಯಂತ 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ಹಾಗೂ ಖಾಸಗಿ(ಕಮರ್ಷಿಯಲ್) ವಾನಗಳನ್ನು ನಿಷೇಧಿಸಲು ನಿರ್ಧರಿಸಿರುವುದಾಗಿ ಸುದ್ದಿಗಾರರ ಜತೆ ಮಾತನಾಡುತ್ತ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಇಂದಿನಿಂದ ಸಾರಿಗೆ ಇಲಾಖೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ವಾಹನಗಳ ಮಾಲಿನ್ಯ ಪರೀಕ್ಷೆ ನಡೆಸಲಾಗುವುದು ಇದರಲ್ಲಿ 15 ವರ್ಷ ಮೇಲ್ಪಟ್ಟ ಖಾಸಗಿ ವಾಹನಗಳಿದ್ದರೆ ಅದಕ್ಕೆ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ, 15 ವರ್ಷಕ್ಕಿಂತ ಹಳೆಯದಲ್ಲದ ವಾಹನಗಳಿಗೆ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next