Advertisement
ರಾಜ್ಯದ 150 ಐಟಿಐ ಕೇಂದ್ರಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಯೋಜನೆ ಇದೆ ಎಂದು ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
Related Articles
Advertisement
ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿ, ಸ್ವ ಉದ್ಯೋಗ ಬಯಸುವ ಪ್ರತಿಭಾನ್ವಿತರಿಗೆ ಜಿಟಿಟಿಸಿ ಭಾಗ್ಯದ ಬಾಗಿಲು ತೆರೆದಂತೆ. ಕೌಶಲ ಆಧಾರಿತ ಶಿಕ್ಷಣದ ಮೂಲಕ ಭಾರತವು ಮುಂದಿನ ದಿನಗಳಲ್ಲಿ ಮಾನವ ಸಂಪನ್ಮೂಲ ಪೂರೈಕೆಯ ರಾಷ್ಟ್ರವಾಗಲಿದೆ ಎಂದರು.
ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಟೊಯೊಟಾ ಕಂಪೆನಿ ಅಧಿಕಾರಿ ರೋಶನ್ ಆರ್., ಪಂಚಾಯತ್ ಅಧ್ಯಕ್ಷ ಕೃಷ್ಣರಾಜ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು ಜಿಟಿಟಿಸಿ ವ್ಯವಸ್ಥಾಪಕ ಲಿಂಗರಾಜ ಸಣ್ಣಮನಿ ಸ್ವಾಗತಿಸಿ, ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಪ್ರಸ್ತಾವನೆಗೈದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ಪ್ರಾಂಶುಪಾಲ ಮಂಜುನಾಥ ನಾಯಕ್ ವಂದಿಸಿದರು.
ಉದ್ಯೋಗ ಖಚಿತಪಾಲಿಟೆಕ್ನಿಕ್ ಮತ್ತು ಜಿಟಿಟಿಸಿ ಕೋರ್ಸ್ ಗಳಿಗೆ ಭಾರೀ ಬೇಡಿಕೆ ಇದೆ. ಇಲ್ಲಿ ಕಲಿತ ಪ್ರತಿಯೊಬ್ಬರಿಗೆ ಉದ್ಯೋಗ ಖಚಿತ ಎಂದು ಸಚಿವ ಅಶ್ವತ್ಥನಾರಾಯಣ ಅವರು ಹೇಳಿದರು.