Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎ. 18ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಪರ ಪೂರ್ವಭಾವಿ ಕೆಲಸಗಳು ನಡೆಯುತ್ತಿವೆ. ಎಲ್ಲ 220 ಬೂತ್ ಗಳಲ್ಲಿ ಮೊದಲ ಸುತ್ತಿನ ಮನೆ ಮನೆ ಭೇಟಿ ಮೂಲಕ ಕೇಂದ್ರ ಸರಕಾರ ಮತ್ತು ಸಂಸದರ ಸಾಧನೆಗಳನ್ನು ತಿಳಿಸಿದ್ದೇವೆ. ಜನರಿಂದ ಉತ್ತರ ಪ್ರತಿಕ್ರಿಯೆ ಸಿಕ್ಕಿದ್ದು, ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕೆಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ ಎಂದರು.
ಎ.15 ರಂದು ಬೆಳಗ್ಗೆ ಪುತ್ತೂರು ನಗರದಲ್ಲಿ ಬೊಳುವಾರಿನಿಂದ ದರ್ಬೆ ತನಕ ಅಭ್ಯರ್ಥಿ ನಳಿನ್ ಕುಮಾರ್ ಅವರು ಪಾದಯಾತ್ರೆ ಪ್ರಚಾರ ನಡೆಸಲಿದ್ದಾರೆ. ಶಾಸಕರು, ರಾಜ್ಯದ ಪ್ರಮುಖರು, ನೂರಾರು ಕಾರ್ಯಕರ್ತರು
ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
Related Articles
ಎಸ್‌ಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧವೇ ಮತಚಲಾವಣೆಯಾದ ಕುರಿತ ಪ್ರಶ್ನೆಗೆ ಉತ್ತರಿಸಿದ ಚನಿಲ ತಿಮ್ಮಪ್ಪ ಶೆಟ್ಟಿ, ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಸಹಕಾರ ಕ್ಷೇತ್ರದ ಚುನಾವಣೆಗೆ ಸಂಬಂಧಪಟ್ಟಂತೆ ಆ ವಿಭಾಗದವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ
ಎಂದು ಉತ್ತರಿಸಿದರು.
Advertisement
ಉಡ್ಡಂಗಳ ಪ್ರಕರಣಉಡ್ಡಂಗಳದಲ್ಲಿ ಮೂವರು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು ಹಾಗೂ ಪಕ್ಷದ ಮುಖಂಡರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳಲ್ಲಿ ಮಾತನಾಡಿ ಸೂಕ್ತ ಪರಿಹಾರ ನೀಡುವಂತೆ ಮತ್ತು ಸಮರ್ಪಕ ತನಿಖೆಗೆ ಶಾಸಕರು ಸೂಚಿಸಿದ್ದಾರೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಜೀವಂಧರ್ ಜೈನ್, ತಾ.
ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಕಾರ್ಯದರ್ಶಿ ಶಂಭು ಭಟ್ ಹಾಗೂ ಗೌರಿ ಬನ್ನೂರು ಉಪಸ್ಥಿತರಿದ್ದರು. ಮಹಾ ಅಭಿಯಾನ
ಎ. 7ರಂದು ವಿಧಾನಸಭಾ ಕ್ಷೇತ್ರದ ಎಲ್ಲ 220 ಬೂತ್‌ಗಳಲ್ಲಿ ಏಕಕಾಲದಲ್ಲಿ ಮಹಾ ಪ್ರಚಾರ ಅಭಿಯಾನ ನಡೆಯಲಿದೆ. ಶಾಸಕರು, ಮಂಡಲದ
ಪದಾಧಿಕಾರಿಗಳು, ವಿವಿಧ ಸಮಿತಿಗಳ ಪದಾಧಿಕಾರಿಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಬೂತ್‌ಗೆ ಪ್ರಮುಖರನ್ನು ನೇಮಿಸಿದ್ದೇವೆ. ವಿಶೇಷ ಸಂಪರ್ಕದ ಮೂಲಕ ಪ್ರಚಾರ ನಡೆಯಲಿದೆ. ಎ. 14ರಂದು ತೃತೀಯ ಸುತ್ತಿನ ಮಹಾ ಅಭಿಯಾನ ನಡೆಯಲಿದೆ ಎಂದು ಮಾಹಿತಿ ನೀಡಿದರು