Advertisement

ಸಿಬಿಎಸ್‌ಇ ಪರೀಕ್ಷೆಗೆ 15 ಸಾವಿರ ಕೇಂದ್ರ

07:23 AM May 26, 2020 | mahesh |

ಲಾಕ್‌ಡೌನ್‌ನಿಂದ ಮುಂದೂಡಲಾಗಿರುವ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯ 10 ಹಾಗೂ 12ನೇ ತರಗತಿಯ ಪರೀಕ್ಷೆಗಳಿಗೆ ದೇಶಾದ್ಯಂತ 15 ಸಾವಿರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದಕ್ಕೂ ಮುನ್ನ 3 ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ದೂರದ ಪ್ರದೇಶಗಳಿಂದ ಬರುವು ದನ್ನು ತಪ್ಪಿಸಲು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ರಮೇಶ್‌ ಪೋಖ್ರಿಯಾಲ್‌ ಸೋಮವಾರ ತಿಳಿಸಿದ್ದಾರೆ.

Advertisement

ಲಾಕ್‌ಡೌನ್‌ನಿಂದ ಮುಂದೂಡಲ್ಪಟ್ಟಿದ್ದ ಸಿಬಿಎಸ್‌ಸಿ ಪರೀಕ್ಷೆ ಗಳನ್ನು ಜುಲೈ 1ರಿಂದ ಜುಲೈ 15ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಕಂಟೈನ್‌ಮೆಂಟ್‌ ಪ್ರದೇಶಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯುವುದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next