Advertisement
ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಮಾತನಾಡಿ, ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ಮೋದಿ ಅವರ ಸರಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ.
ಮಂಡ್ಯದ ಕೆಆರ್‌ಎಸ್ ಬಳಿ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಮಾಡಿದ ಮನವಿಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಈ ಬಗ್ಗೆ ಪರಿಶೀಲನೆ ಮಾಡೋಣ. ಸಂಬಂಧಪಟ್ಟ ಕೇಂದ್ರ ಸಚಿವರ ಜತೆ ಚರ್ಚೆ ಮಾಡುತ್ತೇನೆ. ರಾಜ್ಯದಲ್ಲಿ ಈಗಾಗಲೇ ಒಂದು ಐಐಟಿ ಸ್ಥಾಪನೆಯಾಗಿದೆ. ಇನ್ನೊಂದು ಐಐಟಿ ಬರಲಿ, ಬರಬೇಕು ಕೂಡ. ಎಲ್ಲರೂ ಒಟ್ಟಿಗೆ ಪ್ರಯತ್ನ ಮಾಡಿ ರಾಜ್ಯಕ್ಕೆ ಮತ್ತೂಂದು ಐಐಟಿ ತರೋಣ ಎಂದು ಹೇಳಿದರು.