Advertisement

ರಾಜ್ಯದಲ್ಲಿಂದ 1531 ಮಂದಿಗೆ ಕೋವಿಡ್ ಸೋಂಕು : 19 ಮಂದಿ ಸಾವು

06:45 PM Jul 28, 2021 | Team Udayavani |

ಬೆಂಗಳೂರು : ವಿಶ್ವಮಟ್ಟದಲ್ಲಿ  ಎಲ್ಲರನ್ನು ತಲ್ಲಣಗೊಳಿಸಿರುವ ಕೋವಿಡ್ ದೇಶದಲ್ಲಿ ದಿನಗಳೆದಂತೆ ಕಡಿಮೆಯಾಗುತ್ತಾ ಬರುತ್ತಿದೆ. ಇದರಂತೆ ಕರ್ನಾಟಕ ರಾಜ್ಯದಲ್ಲಿಯೂ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಇಂದು ರಾಜ್ಯದಲ್ಲಿ 1531 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

Advertisement

ಇಂದು ಸೋಂಕಿನಿಂದ ಗುಣಮುಖರಾಗಿ 1430 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು 2840147 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ರಾಜ್ಯದಲ್ಲಿ 22569 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಸೋಂಕು ತಗುಲಿ ಸಾವನ್ನಪ್ಪಿರುವವರ ಸಂಖ್ಯೆ 36456 ಗೆ ತಲುಪಿದೆ.

Advertisement

Udayavani is now on Telegram. Click here to join our channel and stay updated with the latest news.

Next