Advertisement

ಬುಡಕಟ್ಟು ಜನರ ನೆರವಿಗೆ 155 ಕೋಟಿ ರೂ. ಕೋರಿ ಪ್ರಸ್ತಾವ

07:16 AM May 13, 2020 | Lakshmi GovindaRaj |

ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಪ.ಪಂಗಡ ಹಾಗೂ ಬುಡಕಟ್ಟು ಸಮುದಾಯದವರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಜೀವನೋಪಾಯ ಹಾಗೂ ಆರ್ಥಿಕ ಸ್ವಾವಲಂಬನೆಗಾಗಿ 155 ಕೋಟಿ ರೂ. ಮೊತ್ತದ ನಾನಾ ಯೋಜನೆಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ತ್ವರಿತವಾಗಿ ಮಂಜೂ ರಾತಿ ನೀಡಬೇಕು ಎಂದು ಸಮಾಜ ಕಲ್ಯಾಣ ಸಚಿವ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕೇಂದ್ರ ಸಚಿವರಲ್ಲಿ ಮನವಿ  ಮಾಡಿದರು.

Advertisement

ಮಂಗಳವಾರ ಕೇಂದ್ರ ಬುಡಕಟ್ಟು ಕಲ್ಯಾಣ ಸಚಿವ ಜುವಲ್‌ ಓರಾಂ ಅವರೊಂದಿಗೆ ವಿಡಿಯೋ ಸಂವಾದದ  ವೇಳೆ ಮಾತನಾಡಿ, ಕಿರು ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸುವ ಬುಡಕಟ್ಟು ಜನರನ್ನು ಸಂಘಟಿಸಿ ಅವರಿಗೆ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಬೇಕು. ಅವರಿಂದಲೇ ಕಿರು ಅರಣ್ಯ ಉತ್ಪನ್ನಗಳನ್ನು ಹೆಚ್ಚಿನ ಬೆಂಬಲ ಬೆಲೆಯೊಂದಿಗೆ ಖರೀದಿಸಬೇಕು.

ಬೆಂಬಲ ಬೆಲೆ ಹೆಚ್ಚಳಕ್ಕೆ 7 ಕೋಟಿ ರೂ. ಹಾಗೂ ತಲಾ 2 ಕೋಟಿ ರೂ. ವೆಚ್ಚದಲ್ಲಿ 7 ಕಿರು  ಅರಣ್ಯ ಉತ್ಪನ್ನ ಸಂಸ್ಕರಣಾ ಘಟಕಗಳನ್ನು ಸಿಆರ್‌ಟಿಆರ್‌ಐ ಮೂಲಕ ಸ್ಥಾಪಿಸಿ ತಾಂತ್ರಿಕ ಸಹಕಾರದೊಂದಿಗೆ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. 355 ಇ- ಕಾರ್ಟ್‌ ಗಳನ್ನು ಒದಗಿಸಬೇಕು. 41 ಕೋಟಿ ರೂ. ವೆಚ್ಚದಲ್ಲಿ  ಕುರಿ ಮತ್ತು ಮೇಕೆ ಘಟಕಗಳ ಸ್ಥಾಪನೆ ಸೇರಿ ಒಟ್ಟು 155 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವರಿಗೆ ಕಾರಜೋಳ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next