Advertisement
ಒಂದೇ ದಿನ 156 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4868 ಕ್ಕೆ ಏರಿಕೆಯಾಗಿದೆ.
Related Articles
Advertisement
ಇನ್ನು ಸೋಂಕಿತರಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ ಕುಮಾರ್ ತಿಳಿಸಿದ್ದಾರೆ.
ಕೊವಿಡ್ 19 ಸೋಂಕಿನಿಂದ ಮೃತರನ್ನು 62 ವರ್ಷದ ವೃದ್ಧ ಪಿ209836 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಜ್ವರ, ಸಕ್ಕರೆ ಕಾಯಿಲೆ, ಎಚ್‍ಐವಿ ಸೋಂಕಿನಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗಾಗಿ ಆ.5 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆ.15 ರಂದು ಮೃತಪಟ್ಟಿದ್ದಾರೆ.
68 ವರ್ಷ ವೃದ್ಧೆ ಪಿ128462 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಕೆಮ್ಮು, ಜ್ವರ, ಅಸ್ತಮಾ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಜು.22 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆ.10 ರಂದು ಮೃತಪಟ್ಟಿದ್ದಾರೆ.
65 ವರ್ಷದ ವೃದ್ದೆ ಪಿ190480 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಕೆಮ್ಮು ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಆ.8 ರಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಆ.9 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.