ಪಾಟ್ನ: ಬಿಹಾರದ ಪಶ್ಚಿಮ ಚಂಪಾರಣ್ ನಲ್ಲಿ ಕಳೆದ ಎರಡು ದಿನಗಳಲ್ಲಿ ಕಳ್ಳಭಟ್ಟಿ ಶರಾಬು ಕುಡಿದು 16 ಮಂದಿ ಸಾವನ್ನಪ್ಪಿದ್ದು, ಕೆಲವು ಜನರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ: ಸೋಮವಾರ ದೆಹಲಿಗೆ ತೆರಳಲಿರುವ ವಿಪಕ್ಷ ನಾಯಕ
ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಪಶ್ಚಿಮ ಚಂಪಾರಣ್ ಜಿಲ್ಲೆಯ ಲೌರಿಯಾ ಬ್ಲಾಕ್ ನ ಕೆಲವು ಹಳ್ಳಿಗಳಲ್ಲಿ ಈ ನಡೆದಿರುವುದಾಗಿ ವಿವರಿಸಿದೆ. ಈ ಕುರಿತು ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ರೇಣು ದೇವಿ, ಪರಿಸ್ಥಿತಿಯ ಬಗ್ಗೆ ಸರ್ಕಾರ ಮೇಲ್ವಿಚಾರಣೆ ನಡೆಸುತ್ತಿದೆ. ಅಲ್ಲದೇ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಸ್ಥಳೀಯರು ಈ ಬಗ್ಗೆ ಮಾತನಾಡಲು ಸಿದ್ಧರಿಲ್ಲ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ದೇವಿ ಹೇಳಿದರು. ಲೌರಿಯ ಬ್ಲಾಕ್ ನಲ್ಲಿನ ಕೆಲವು ಹಳ್ಳಿಗಳಲ್ಲಿ ಈ ಸಾವು ಸಂಭವಿಸಿರುವುದಾಗಿ ನಮಗೆ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.
ಈವರೆಗೆ ಸಾವನ್ನಪ್ಪಿರುವ ಒಟ್ಟು ಪ್ರಕರಣಗಳಲ್ಲಿ ಪ್ರಾಣ ಕಳೆದುಕೊಂಡ ಎಂಟು ಮಂದಿ ಕುಟುಂಬ ಸದಸ್ಯರು ಆಲ್ಕೋಹಾಲ್ ಸೇವಿಸಿರುವ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ಜಿಲ್ಲಾಧಿಕಾರಿ ಕುಂದನ್ ಕುಮಾರ್ ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.