ತೆಗುಸಿಗಲ್ಪಾ: ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದು ಎರಡು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹೊಂಡುರಾಸ್‌ನಲ್ಲಿ ಮಂಗಳವಾರ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 60 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್, ಮಧ್ಯ ಅಮೇರಿಕಾ ದೇಶದ ರಾಜಧಾನಿ ತೆಗುಸಿಗಲ್ಪಾದಿಂದ ಸುಮಾರು 41 ಕಿಲೋಮೀಟರ್ ದೂರದಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದಿದೆ.
ಘಟನೆಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೆಗುಸಿಗಲ್ಪಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಅಗ್ನಿಶಾಮಕ ದಳದ ಲೆಫ್ಟಿನೆಂಟ್ ಕ್ರಿಸ್ಟಿಯನ್ ಸೆವಿಲ್ಲಾ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿದೆ.
ಗಂಭೀರವಾಗಿ ಗಾಯಗೊಂಡವರನ್ನು ಆಂಬ್ಯುಲೆನ್ಸ್ ಮತ್ತು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾದವರಲ್ಲಿ ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಸರಕಾರ ಮೂರು ದಿನಗಳ ಶೋಕಾಚರಣೆ ನಡೆಸಲಿದೆ ಎಂದು ಅಧ್ಯಕ್ಷ ಕ್ಸಿಯೋಮಾರಾ ಕ್ಯಾಸ್ಟ್ರೋ ಅವರು ಹೇಳಿದ್ದಾರೆ.
ಇದನ್ನೂ ಓದಿ: Chennai flood: ಜನಸಾಮಾನ್ಯರ ಜೊತೆ ಪ್ರವಾಹದಲ್ಲಿ ಸಿಲುಕಿದ ನಟ ಅಮೀರ್ ಖಾನ್, ವಿಷ್ಣು ವಿಶಾಲ್