Advertisement

ಹಿಮಾಚಲ ಪ್ರದೇಶ: ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, ವಿದ್ಯಾರ್ಥಿಗಳು ಸೇರಿ 16 ಸಾವು

10:37 AM Jul 04, 2022 | Team Udayavani |

ನವದೆಹಲಿ:ಖಾಸಗಿ ಶಾಲಾ ಬಸ್ ವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ 16 ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ (ಜುಲೈ 04) ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ನಡೆದಿರುವುದಾಗಿ ತಿಳಿಸಿದೆ.

Advertisement

ಇದನ್ನೂ ಓದಿ:ನಾನೆಂದೂ ಮುಖ್ಯಮಂತ್ರಿ ಹುದ್ದೆಯನ್ನು ಕೇಳಿಲ್ಲ: ಮಹಾ ಸಿಎಂ ಏಕನಾಥ ಶಿಂಧೆ

ಸೈಂಜ್ ಪ್ರದೇಶಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಜಂಗ್ಲಾ ಗ್ರಾಮದ ಸಮೀಪ ಆಳವಾದ ಕಮರಿಗೆ ಬಿದ್ದಿರುವುದಾಗಿ ಕುಲ್ಲು ಡೆಪ್ಯುಟಿ ಕಮಿಷನರ್ ಅಶುತೋಷ್ ಗರ್ಗ್ ತಿಳಿಸಿದ್ದಾರೆ. ಇಂದು ಬೆಳಗ್ಗೆ ಈ ಘಟನೆ ನಡೆದಿದೆ.

ಬಸ್ ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 45 ಮಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದು, ಕಂದಕಕ್ಕೆ ಬಿದ್ದವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next