Advertisement

ಲಿಂಗಾಯತರಿಗೆ ಶೇ. 16 ಮೀಸಲಾತಿಗೆ ಸಿಎಂಗೆ ಪತ್ರ

10:55 PM Jan 17, 2020 | Lakshmi GovindaRaj |

ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿ ಸಮಸ್ತ ಲಿಂಗಾಯತ ಸಮುದಾಯಕ್ಕೆ ಶೇ.16 ರಷ್ಟು ಮೀಸಲಾತಿ ನೀಡುವಂತೆ ವಿಧಾನ ಪರಿಷತ್‌ ಸದಸ್ಯ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಮಹಾರಾಷ್ಟ್ರದಲ್ಲಿ ಬಹು ಸಂಖ್ಯಾತರಾಗಿರುವ ಹಾಗೂ ಪ್ರವರ್ಗ 3ಬಿ ಯಲ್ಲಿರುವ ಹಿಂದೂ ಮರಾಠ ಸಮುದಾಯಕ್ಕೆ ಹಾಲಿ ಇರುವ ಮೀಸಲಾತಿ ಶೇ.50ರಲ್ಲಿ ಕಡಿತಗೊಳಿಸದೇ ಶೇ.16 ರಷ್ಟು ಮೀಸಲಾತಿ ನೀಡಿದ್ದು, ಇದರಿಂದ ಮಹಾರಾಷ್ಟ್ರದಲ್ಲಿ ಮೀಸಲಾತಿ ಪ್ರಮಾಣ ಶೇ.68 ರಷ್ಟಾಗಿದೆ. ಹಿಂದುಳಿದಿರು ವಿಕೆಗೆ ಸೂಕ್ತ ದಾಖಲೆಗಳಿದ್ದರೆ ಮೀಸಲಾತಿ ಪ್ರಮಾಣವನ್ನು ಶೇ.50ನ್ನು ಮೀರಿ ನೀಡಬಹುದು ಎಂದು ಹೇಳಿದೆ.

ಅದರಂತೆ ಮಹಾರಾಷ್ಟ್ರ ಸರ್ಕಾರ ಮರಾಠ ಸಮುದಾಯಕ್ಕೆ ಶೇ.16 ಮೀಸಲಾತಿ ನೀಡಿದ್ದು, ಅದನ್ನು ಬಾಂಬೆ ಹೈಕೋರ್ಟ್‌ ಎತ್ತಿ ಹಿಡಿದಿದೆ. ಅದೇ ರೀತಿ ತಮಿಳುನಾಡಿನಲ್ಲಿ ಮೀಸಲಾತಿ ಪ್ರಮಾಣ ಶೇ.69, ಹರಿಯಾಣದಲ್ಲಿ ಶೇ. 70 ಮೀಸಲಾತಿ ನೀಡಲಾಗುತ್ತಿದೆ. ರಾಜ್ಯದಲ್ಲಿಯೂ ಲಿಂಗಾಯತ ಸಮುದಾಯದಲ್ಲಿ ಶೇ.80 ರಷ್ಟು ಜನರು ಬಡವರಾಗಿದ್ದು, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕೆಂದು ಸಮಸ್ತ ಲಿಂಗಾಯತ ಸಮುದಾಯದ ಬೇಡಿಕೆಯಾಗಿದೆ.

ರಾಜ್ಯ ಸರ್ಕಾರ ಈಗಾಗಲೇ ಬೇರೆ ಬೇರೆ ಸಮುದಾಯಗಳ ಮೀಸಲು ಪ್ರಮಾಣ ಹೆಚ್ಚಳ ಮಾಡುವ ಕುರಿತು ಹಿಂದುಳಿದ ವರ್ಗಗಳ ಇಲಾಖೆ ಮೂಲಕ ಕುಲ ಶಾಸ್ತ್ರೀಯ ಅಧ್ಯಯನಕ್ಕೆ ಏಕ ವ್ಯಕ್ತಿ ಆಯೋಗ ರಚಿಸಲು ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next