Advertisement
ಶನಿವಾರ, ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗೆ ಸಂಪರ್ಕ ಪತ್ತೆ ಜಾಡು ತಂಡ, ಕ್ವಾರಂಟೈನ್ ನಿರ್ವಹಣೆ, ಅವಶ್ಯಕ ಸಾಮಗ್ರಿ ಪೂರೈಕೆ, ಬಯೋ ಮೆಡಿಕಲ್ ಹಾಗೂ ಮೃತ ದೇಹ ನಿರ್ವಹಣೆ, ಅಂಬುಲೆನ್ಸ್ ಸಂಚಾರ ನಿರ್ವಹಣೆ, ತುರ್ತು ಸಂದರ್ಭ ಯೋಜನೆ ನಿರ್ವಹಣೆ, ಕೃಷಿ ಪರಿಕರ ಪೂರೈಕೆ ಸೇರಿದಂತೆ ಒಟ್ಟು 16 ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಕ್ವಾರಂಟೈನ್‌ಲ್ಲಿರುವವರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಇದಕ್ಕಾಗಿ ಕೆಲ ಲಾಡ್ಜ್ಗಳನ್ನು ಗುರುತಿಸಲಾಗಿದ್ದು, ಅವುಗಳ ಮೇಲುಸ್ತುವಾರಿಗೆ ಸುರೇಶ ರೆಡ್ಡಿ ಅವರನ್ನು ನೋಡಲ್ ಅಧಿ ಕಾರಿಯನ್ನಾಗಿ ಮಾಡಲಾಗಿದೆ ಎಂದರು.
Related Articles
Advertisement
ಸಂಘ ಸಂಸ್ಥೆಗಳು ಕೆಲವೆಡೆ ಊಟ ತಿಂಡಿ ಸರಬರಾಜು ಮಾಡುತ್ತಿದ್ದು, ಅಂತವರು ಅಪರ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಆಹಾರ ಸುರಕ್ಷತೆ ಪರೀಕ್ಷಕರು ಆಹಾರದ ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಕೆಲವು ಚೆಕ್ ಪೋಸ್ಟ್‌ಗಳಲ್ಲಿ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಕುಡಿಯುವ ನೀರು, ಟಾರ್ಚ್, ಶಾಮಿಯಾನ, ಗುರುತಿನ ಚೀಟಿಯ ಅಗತ್ಯವಿದೆ ಎಂದರು.
ಡಿಎಚ್‌ಒ ಡಾ| ರಾಘವೇಂದ್ರಸ್ವಾಮಿ ಮಾತನಾಡಿ, ಚಿಗಟೇರಿ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದು, ಪ್ರಸ್ತುತ 70 ಮಂದಿಗೆ ಚಿಕಿತ್ಸೆಗೊಳಿಪಡುವಷ್ಟು ಎಲ್ಲ ರೀತಿಯ ವೈದ್ಯಕೀಯ, ಸಾಮಗ್ರಿಗಳು, ಮಾನವ ಸಂಪನ್ಮೂಲ ಸಿದ್ದವಿಟ್ಟುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಡಿ.ರಾಘವನ್ ಮಾತನಾಡಿ, ಐಸೋಲೇಷನ್ ಕ್ವಾರಂಟೈನ್ ಹಾಗೂ ಹೊಮ್ ಕ್ವಾರಂಟೈನ್ ಅವಧಿ ಮುಗಿದಿರುವವರಿಗೆ ಕೇಂದ್ರ ಸರ್ಕಾರದ ನಿರ್ದೇಶನದಂತೆ ದೃಢೀಕರಣ ಪತ್ರ ನೀಡಲಾಗುವುದು ಹಾಗೂ ಕೋವಿಡ್-19 ಕಾರ್ಯದಲ್ಲಿ ಭಾಗವಹಿಸುವ ಆರೋಗ್ಯ ಸಿಬ್ಬಂದಿಗಳಿಗೆ ಐಇಸಿ ತರಬೇತಿ ನೀಡಲಾಗಿದೆ. ಅಗತ್ಯವಿರುವ ಔಷಧ, ಮಾತ್ರೆಗಳು ಲಭ್ಯವಿವೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಸಿಇಒ ಪದ್ಮಾ ಬಸವಂತಪ್ಪ, ಎಡಿಸಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಐಆರ್‌ಎಸ್ ನೋಡಲ್ ಅಧಿಕಾರಿ ಪ್ರಮೋದ ನಾಯಕ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಸ್ಮಾರ್ಟ್‌ಸಿಟಿ ಎಂಡಿ ರವಿಂದ್ರ ಮಲ್ಲಾಪುರ, ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ ಬೊಮ್ಮನ್ನಾರ್ ಇದ್ದರು.