Advertisement

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,299 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

01:28 PM Aug 11, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,299 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,42,06,996ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಆಗಸ್ಟ್ 11) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಪದೇ ಪದೇ ಜಾಗ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಆರೋಪಿಗಳ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,25,076ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 53 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,26,879ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ವಿವರಿಸಿದೆ.

ಭಾರತದಲ್ಲಿನ ಕೋವಿಡ್ 19 ಸೋಂಕು ಪ್ರಕರಣದ ಚೇತರಿಕೆ ಪ್ರಮಾಣ ಶೇ.98.53ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.94ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಕೂಡಾ ಶೇ.4.90ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.

ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,35,55,041ಕ್ಕೆ ತಲುಪಿದೆ. ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿನ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 207.29 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next