Advertisement

ರಾಜ್ಯದಲ್ಲಿ ಇಂದು ಮತ್ತೆ 1694 ಸೋಂಕು ಪ್ರಕರಣ ಪತ್ತೆ ; ಬೆಂಗಳೂರು ಹಾಟ್ ಸ್ಪಾಟ್!

08:44 PM Jul 03, 2020 | Hari Prasad |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಅಟ್ಟಹಾಸ ಇಂದೂ ಸಹ ಜೋರಾಗಿದೆ.

Advertisement

ಬೆಂಗಳೂರಿನಲ್ಲಿ ಸೋಂಕು ಸಮುದಾಯ ಮಟ್ಟಕ್ಕೆ ಹಬ್ಬಿರುವ ಸ್ಪಷ್ಟ ಸೂಚನೆ ಲಭಿಸತೊಡಗಿದ್ದು ಇಲ್ಲಿ ಒಂದೇ ದಿನ 994 ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಒಟ್ಟಾರೆ 1694 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವತ್ತು ಒಂದೇ ದಿನ 21 ಜನ ಸೋಂಕಿತರು ಮೃತಪಟ್ಟಿದ್ದಾರೆ.

ರಾಜ್ಯ ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತೀ ಹೆಚ್ಚಿನ 994 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು ರಾಜಧಾನಿಯಲ್ಲಿ ಸೋಂಕಿನ ಆರ್ಭಟ ಮಿತಿ ಮೀರುತ್ತಿದೆ. ಉಳಿದಂತೆ ಬಳ್ಳಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಅತೀ ಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗಿವೆ.

ಇಂದೂ ಸಹ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರು ನಗರವೇ ಮುಂಚೂಣಿಯಲ್ಲಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಬಳ್ಳಾರಿ, ಕಲಬುರಗಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಧಾರವಾಡ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ.

Advertisement

ಇಂದು ರಾಜ್ಯಾದ್ಯಂತ 471 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿಂದು ಕೋವಿಡ್ 19 ಸೋಂಕಿಗೆ 21 ಜನ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದಿನವರೆಗೆ 19740 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 8805 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತು ಸಾವಿರದ ಗಡಿ ದಾಟಿದ್ದು 10608 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ಗ್ರಾಮದ 5 ಜನರಿಗೆ ಸೋಂಕು: ಹರೇಕಳ ಗ್ರಾಮ ಪಂಚಾಯತ್‌ ಹತ್ತು ದಿನ ಲಾಕ್ ಡೌನ್

ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 293 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 201 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 994 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ – 97, ಬಳ್ಳಾರಿ – 97, ಕಲಬುರಗಿ – 72, ತುಮಕೂರು – 57, ಬೆಂಗಳೂರು ಗ್ರಾಮಾಂತರ – 44, ಧಾರವಾಡ – 38, ಮೈಸೂರು – 35, ಮಂಡ್ಯ – 33, ಬೀದರ್ – 28, ಚಾಮರಾಜನಗರ – 24, ಶಿವಮೊಗ್ಗ – 23, ಗದಗ -19, ಉಡುಪಿ – 14, ಕೊಡಗು – 16, ಯಾದಗಿರಿ – 14, ಹಾಸನ – 13, ಬೆಳಗಾವಿ – 13, ಕೋಲಾರ – 11, ಮತ್ತು ರಾಮನಗರ – 10 ಇವಿಷ್ಟು ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 7173ಕ್ಕೆ ಏರಿಕೆಯಾಗಿದ್ದು, 770 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 6297 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 105 ಸಾವುಗಳು ಸಂಭವಿಸಿದೆ.

ಇನ್ನುಳಿದಂತೆ ಕಲಬುರಗಿಯಲ್ಲಿ ಒಟ್ಟು 1560 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1143 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 395 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 22 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ನಿಲ್ಲದ ಕೋವಿಡ್ ಓಟ: ಉಡುಪಿ ಜಿಲ್ಲೆಯಲ್ಲಿಂದು 16 ಮಂದಿಗೆ ಸೋಂಕು ದೃಢ

ಇನ್ನು ಉಡುಪಿ ಜಿಲ್ಲೆಯಲ್ಲಿ 1258 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1093 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 162 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 3 ಸಾವುಗಳು ಸಂಭವಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1012 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು ಇವರಲ್ಲಿ 487 ಸೋಂಕಿತರು ಗುಣಮುಖರಾಗಿದ್ದಾರೆ. 507 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 16 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1081 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 495 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 552 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 34 ಸಾವು ಸಂಭವಿಸಿದೆ.

ಇದನ್ನೂ ಓದಿ: ಬೀದರ್‌: ಪಿಎಸ್‌ಐ ಸೇರಿ 28 ಮಂದಿಗೆ ಕೋವಿಡ್‌-19 ಸೋಂಕು

ಯಾದಗಿರಿ ಜಿಲ್ಲೆಯಲ್ಲಿ 970 ಕೋವಿಡ್ ಸೋಂಕಿನ ಪ್ರಕರಣಗಳು
ದಾಖಲಾಗಿದ್ದು 855 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 114 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.

ಇಂದು ರಾಜ್ಯದಲ್ಲಿ ಒಟ್ಟು 18307 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 16290 ವರದಿಗಳು ನೆಗೆಟಿವ್ ಬಂದಿದೆ ಮತ್ತು 1694 ಪ್ರಕರಣಗಳು ಪಾಸಿಟಿವ್ ಆಗಿವೆ.

ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 671934 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 635582 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 19710 ವರದಿಗಳು ಪಾಸಿಟಿವ್ ಆಗಿವೆ.

Advertisement

Udayavani is now on Telegram. Click here to join our channel and stay updated with the latest news.

Next