ನವದೆಹಲಿ : ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುತ್ತಿದ್ದು. ಇದರ ಪರಿಣಾಮ ಹವಾಮಾನದಲ್ಲಿ ಉಂಟಾದ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಈ ವಿಮಾನಗಳನ್ನು ಲಕ್ನೋ, ಜೈಪುರ ಮತ್ತು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಿಂದ 17 ವಿಮಾನಗಳ ಪೈಕಿ ತಲಾ 8 ವಿಮಾನಗಳನ್ನು ಲಕ್ನೋ ಮತ್ತು ಜೈಪುರಕ್ಕೆ ತಿರುಗಿಸಲಾಗಿದೆ ಮತ್ತು ಒಂದನ್ನು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Related Articles
Advertisement