Advertisement

ಲಕ್ಷದ್ವೀಪ: 17 ದ್ವೀಪಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ, ಸ್ಥಳೀಯ ಆಡಳಿತದಿಂದ ಆದೇಶ

09:54 PM Dec 31, 2022 | Team Udayavani |

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ ಒಟ್ಟು 36 ದ್ವೀಪಗಳು ಇವೆ. ಈ ಪೈಕಿ ಜನವಸತಿ ರಹಿತ 17 ದ್ವೀಪಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

Advertisement

ಈ 17 ಜನವಸತಿ ರಹಿತ ದ್ವೀಪಗಳಿಗೆ ಪ್ರವೇಶ ಪಡೆಯಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ ಅವರಿಂದ ಅನುಮತಿ ಪಡೆಯಬೇಕಾಗುತ್ತದೆ. ಲಕ್ಷದ್ವೀಪ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಈ 17 ದ್ವೀಪಗಳಲ್ಲಿ ಸಿಆರ್‌ಪಿಸಿ ಸೆಕ್ಷನ್‌ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಈ ದ್ವೀಪಗಳಲ್ಲಿ ತೆಂಗಿನ ಕಾಯಿಗಳನ್ನು ಕಿತ್ತು, ಸರಬರಾಜು ಮಾಡುವ ಕಾರ್ಯಕ್ಕಾಗಿ ಕೂಲಿ ಕೆಲಸಗಾರರಿಗಾಗಿ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಲಾಗಿದೆ. ಆದರೆ ಕೆಲವು ಪಟ್ಟಭದ್ರರು ಇವುಗಳನ್ನು ಉಗ್ರ ಚಟುವಟಿಕೆಗಳು, ಕಳ್ಳಸಾಗಣೆ, ಮಾದಕವಸ್ತು ಮತ್ತು ಶಸ್ತ್ರಾಸ್ತ್ರ ಸಂಗ್ರಹ, ಪೊಲೀಸರಿಂದ ತಪ್ಪಿಸಿಕೊಳ್ಳಲು ಅಡಗುತಾಣಗಳು ಸೇರಿದಂತೆ ಅಕ್ರಮ ಚಟುವಟಿಕೆಗಳಿಗಾಗಿ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕಲು ಹಾಗೂ ಪ್ರವಾಸಿಗರ ಸುರಕ್ಷತೆಯ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next