Advertisement

ಅನಂತ್ ಕುಮಾರ್ ಹೆಗಡೆ ಸೇರಿ 17 ಮಂದಿ ಸಂಸದರಿಗೆ ಕೋವಿಡ್ ಸೋಂಕು ದೃಢ

03:39 PM Sep 14, 2020 | keerthan |

ಹೊಸದಿಲ್ಲಿ: ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ, ಹೊಸದಿಲ್ಲಿ ಸಂಸದೆ ಮೀನಾಕ್ಷಿ ಲೇಖಿ ಸೇರಿದಂತೆ 17 ಮಂದಿ ಸಂಸದರಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ ಎಂದು ವರದಿಯಾಗಿದೆ.

Advertisement

ಸುದ್ದಿ ಸಂಸ್ಥೆ ಎಎನ್ ಐ ಈ ಬಗ್ಗೆ ವರದಿ ಮಾಡಿದ್ದು, ಮೀನಾಕ್ಷಿ ಲೇಖಿ, ಅನಂತ್ ಕುಮಾರ್ ಹೆಗಡೆ, ಪ್ರವೇಶ್ ಸಾಹೇಬ್ ಸಿಂಗ್ ಸೇರಿದಂತೆ 17 ಮಂದಿ ಸಂಸದರಿಗೆ ಕೋವಿಡ್ ಸೋಂಕು ದೃಢವಾಗಿದೆ ಎಂದಿದೆ.

ಇಂದಿನಿಂದ ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಿದೆ. ಸಂಸದರು ಈಗಾಗಲೇ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ರವಿವಾರ ಐವರು ಸಂಸದರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿತ್ತು.

ಇದನ್ನೂ ಓದಿ: ಯಾವುದೇ ಚರ್ಚೆಯಿಂದ ಹಿಂದೆ ಸರಿಯುವುದಿಲ್ಲ: ಪ್ರಶ್ನೋತ್ತರ ಅವಧಿ ರದ್ದತಿ ಸಮರ್ಥಿಸಿದ ಕೇಂದ್ರ

ಸಾಮಾಜಿಕ ಅಂತರ ಕಲ್ಪಿಸುವ ಉದ್ದೇಶದಿಂದ ಸದನದಲ್ಲಿ ಆಸನ ವ್ಯವಸ್ಥೆಯನ್ನು ಅದಲು ಬದಲು ಮಾಡಲಾಗಿದೆ. ಕೆಲವರಿಗೆ ತಮ್ಮ ತಮ್ಮ ಕಚೇರಿಗಳಲ್ಲಿ ಮತ್ತು ಮೊಗಸಾಲೆಗಳಲ್ಲಿ ಕುಳಿತು ಸದನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next