Advertisement

ಇನ್ನೂ 175 ಮಂದಿ ವರದಿ ಬಾಕಿ

03:19 PM Jun 14, 2020 | Suhan S |

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಯಾವುದೇ ಕೋವಿಡ್ ಸೋಂಕು ಪ್ರಕರಣ ವರದಿಯಾಗಿಲ್ಲ. ಆದರೆ, ಜಿಲ್ಲಾಡಳಿತ 175 ಗಂಟಲು ದ್ರವ ಮಾದರಿ ಪರೀಕ್ಷೆಯ ವರದಿಗೆ ಕಾಯುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ 305 ಜನರಿಗೆ ಸೋಂಕು ತಗುಲಿದ್ದು, ಅದರಲ್ಲಿ ಎಂಟು ಜನ ಬಾಗಲಕೊಟೆ ಜಿಲ್ಲೆಗೆ ಸೇರಿದವರಾಗಿದ್ದಾರೆ. ಒಟ್ಟು 219 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಈಗ 85 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇವತ್ತಿನವರೆಗೆ 15223 ಜನರ ಮೇಲೆ ನಿಗಾ ವಹಿಸಲಾಗಿದೆ. ಇದುವರೆಗೆ 2139 ಜನರು 14 ದಿನಗಳ ಗೃಹ ನಿಗಾದಲ್ಲಿದ್ದರೆ, 85 ಜನರು ಆಸ್ಪತ್ರೆಯ ಐಸೋಲೇಷನ್‌ ಘಟಕದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 5086 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 7913 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ.

ಇವತ್ತಿನವರೆಗೆ 13927 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, 13094 ಜನರ ವರದಿ ನಕಾರಾತ್ಮಾಕವಾಗಿವೆ. ಒಟ್ಟು 175 ಜನರ ವರದಿಗಾಗಿ ಕಾಯಲಾಗುತ್ತಿದೆ ಎಂದು ಸರಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next