Advertisement

177 ಕಾಶ್ಮೀರಿ ಪಂಡಿತ್ ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲು ಸರ್ಕಾರದ ಆದೇಶ

01:03 PM Jun 04, 2022 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಹೆಚ್ಚುತ್ತಿರುವ ಹತ್ಯೆಗಳ ಕಾರಣದಿಂದ ಶ್ರೀನಗರದಲ್ಲಿ ನಿಯೋಜಿಸಲಾದ 177 ಕಾಶ್ಮೀರಿ ಪಂಡಿತ್ ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲು ಸರ್ಕಾರ ಆದೇಶಿಸಿದೆ.

Advertisement

ಕಾಶ್ಮೀರಿ ಪಂಡಿತ್ ಸಮುದಾಯ ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ದಾಳಿಗಳ ಸರಣಿಯ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಮೇ 12 ರಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ರಾಹುಲ್ ಭಟ್ ಎಂಬಾತನನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು. ಈ ಬಳಿಕ 2012 ರಲ್ಲಿ ಪ್ರಧಾನ ಮಂತ್ರಿಗಳ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗಿಯಾಗಿದ್ದ ಕಾಶ್ಮೀರಿ ಪಂಡಿತರು ಸಾಮೂಹಿಕ ವಲಸೆ ಬೆದರಿಕೆಯೊಡ್ಡಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ:ಕೆಕೆ ಸಾವಿಗೂ ಮುನ್ನ ಪೋಸ್ಟ್: ಕ್ಷಮೆಯಾಚಿಸಿದ ಬಂಗಾಳಿ ಗಾಯಕ ರೂಪಂಕರ್

ರಾಹುಲ್ ಭಟ್ ಅವರ ಹತ್ಯೆಯ ಬಳಿಕ ವಿವಿಧ ಸ್ಥಳಗಳಲ್ಲಿ ಸುಮಾರು 6,000 ಉದ್ಯೋಗಿಗಳು ಪ್ರತಿಭಟನೆಯನ್ನು ಆರಂಭಿಸಿದ್ದರು. ಕೇಂದ್ರಾಡಳಿತ ಪ್ರದೇಶದಿಂದ ಅವರನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು. ಅಂದಿನಿಂದ ಕಾಶ್ಮೀರದ ಭಯೋತ್ಪಾದಕರ ಹಿಂಸಾಚಾರವು ಉಲ್ಬಣಗೊಂಡಿದೆ.

Advertisement

ಗುರುವಾರ, ಕಾಶ್ಮೀರದಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳ ಹತ್ಯೆಯಾಗಿದೆ. ಬ್ಯಾಂಕ್ ಉದ್ಯೋಗಿ ಮತ್ತು ಇಟ್ಟಿಗೆ ಗೂಡು ಕಾರ್ಮಿಕನನ್ನು ಹತ್ಯೆ ಮಾಡಲಾಗಿದೆ. ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದಾರೆ. ಮೇ.10ರ ಬಳಿಕ ನಡೆದ ಒಂಬತ್ತನೇ ಹತ್ಯೆ ಪ್ರಕರಣ ಇದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next