Advertisement

ಮುಗಿಯದ ಕೋವಿಡ್ ಕಾಟ: ಉಡುಪಿಯಲ್ಲಿಂದು 18 ಜನರಿಗೆ ಸೋಂಕು ದೃಢ

05:58 PM Jun 29, 2020 | keerthan |

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೋವಿಡ್-19 ಸೋಂಕಿನ ಕಳವಳ ಮುಂದುವರಿದಿದೆ. ಇಂದು ಜಿಲ್ಲೆಯಲ್ಲಿ ಮತ್ತೆ 18 ಜನರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 1197 ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯಲ್ಲಿ ರವಿವಾರ 40 ಜನರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಇಂದು 18 ಜನರಿಗೆ ಸೋಂಕು ತಗುಲಿದೆ. ನಿನ್ನೆ ನಗರದ ಹೋಟೆಲ್ ಒಂದರ ಬಾಣಸಿಗನಿಗೆ ಕೋವಿಡ್ ಸೋಂಕು ದೃಢಪಟ್ಟು ಆತಂಕಕ್ಕೆ ಕಾರಣವಾಗಿತ್ತು.

ಜಿಲ್ಲೆಯಲ್ಲಿ ಒಟ್ಟು 1197 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಅದರಲ್ಲಿ 1056 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಜಿಲ್ಲೆಯಲ್ಲಿ ಇದುವರೆಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 139 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇದುವರೆಗೆ 14268 ಜನರ ಗಂಟಲು ದ್ರವ ಸಂಗ್ರಹಿಸಲಾಗಿದ್ದು, ಅದರಲ್ಲಿ 12862 ಮಂದಿಯ ವರದಿ ನೆಗಟಿವ್ ಬಂದಿದೆ. 1197 ವರದಿ ಪಾಸಿಟಿವ್ ಆಗಿದ್ದರೆ, 209 ವರದಿಗಳು ಇನ್ನು ಜಿಲ್ಲಾಡಳಿತದ ಕೈ ಸೇರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next