ಹೈದರಾಬಾದ್ : ಆಂಧ್ರಪ್ರದೇಶದ ಎಲ್ಲೂರು ಜಿಲ್ಲೆಯಲ್ಲಿ ಶನಿವಾರ ಹದಿನೆಂಟು ಬೀದಿನಾಯಿಗಳಿಗೆ ವಿಷ ನೀಡಿ ಕೊಂದು ಹಾಕಿರುವ ಭೀಬತ್ಸ ಘಟನೆ ಬೆಳಕಿಗೆ ಬಂದಿದೆ.
ನಾಯಿಗಳಿಗೆ ಮಾರಕ ಚುಚ್ಚುಮದ್ದು ನೀಡಿ ಸಾಯಿಸಲು ಚೇಬ್ರೋಲೆ ಗ್ರಾಮದ ಸರಪಂಚ್ ಮತ್ತು ಕಾರ್ಯದರ್ಶಿ ಆದೇಶ ನೀಡಿರುವುದಾಗಿ ಆರೋಪಿ ವೀರಬಾಬು ಹೇಳಿಕೆ ನೀಡಿದ್ದಾನೆ.
ವೀರಬಾಬು ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಪ್ರಮುಖ ರೂವಾರಿಗಳಾದ ಗ್ರಾಮದ ಮುಖ್ಯಸ್ಥ ಹಾಗೂ ಕಾರ್ಯದರ್ಶಿಯ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರಗಿಸುವಂತೆ ಪ್ರಾಣಿ ದಯಾ ಸಂಘ ಒತ್ತಾಯ ಮಾಡಿದೆ.
ಈ ವರ್ಷದ ಆರಂಭದಲ್ಲಿ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಬೀದಿನಾಯಿಗಳ ಮಾರಣಹೋಮ ನಡೆಸಲಾಗಿತ್ತು. ಅಲ್ಲದೆ ನಾಯಿಗಳ ಶವಗಳು ಗುಂಡಿಯಲ್ಲಿ ಬಿದ್ದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು ಇದೀಗ ಮತ್ತೆ ಅಂತದ್ದೇ ಘಟನೆ ಬೆಳಕಿಗೆ ಬಂದಿರುವುದು ಪ್ರಾಣಿ ಪ್ರಿಯರಲ್ಲಿ ಆಕ್ರೋಶ ಹುಟ್ಟುವಂತೆ ಮಾಡಿದೆ.
ಇದನ್ನೂ ಓದಿ : ಪಾಕ್ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ: ಕಳೆದ ಮೂರು ದಿನದಲ್ಲಿ ನಡೆದ ಎರಡನೇ ಘಟನೆ