Advertisement

ದಕ್ಷಿಣ ಕನ್ನಡದಲ್ಲಿ ಮತ್ತೆ 18 ಸೋಂಕಿತರು: ಸೋಂಕಿತರ ಪಟ್ಟಿಯಲ್ಲಿ ಶತಕದತ್ತ ಜಿಲ್ಲೆ

06:16 PM May 28, 2020 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 18 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 24 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

Advertisement

ಜಿಲ್ಲೆಯ ಈಗಿನ 18 ಸೇರಿದಂತೆ ಇಂದಿನ ಎಲ್ಲಾ 24 ಮಂದಿ ಸೋಂಕಿತರು ಮಹಾರಾಷ್ಟ್ರ ರಾಜ್ಯದಿಂದ ಬಂದು ಜಿಲ್ಲೆಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರು ಆಗಿದ್ದಾರೆ. ಇವರಿಗೆ ನಿಗಧಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಶತಕದ ಅಂಚಿಗೆ ತಲುಪಿದೆ. ಜಿಲ್ಲೆಯಲ್ಲಿ ಒಟ್ಟು 97 ಸೋಂಕು ಪ್ರಕರಣಗಳು ದೃಢವಾಗಿದೆ.

ಜಿಲ್ಲೆಯ 97 ಪ್ರಕರಣಗಳ ಪೈಕಿ 37 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅದರಲ್ಲೂ 12 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 63 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಓರ್ವ ಸೋಂಕಿತ ಸೋಂಕು ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next