ಛತ್ತೀಸ್ ಗಢ್: ಇಲ್ಲಿನ ಸುಕ್ಮಾ- ಬಿಜಾಪುರ ಗಡಿ ಪ್ರದೇಶದಲ್ಲಿ ಶನಿವಾರ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿಎಂಟು ಮಂದಿ ಯೋಧರು ಹುತಾತ್ಮರಾಗಿದ್ದು, 18 ಮಂದಿ ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಸಿಆರ್‌ಪಿಎಫ್ ನ ಕೋಬ್ರಾ ಪಡೆ, ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಗಾರ್ಡ್ಸ್‌ನ 2 ಸಾವಿರ ಸಿಬ್ಬಂದಿ ಛತ್ತೀಸ್‌ಗಡದ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಜಾಗರ್‌ಗುಂಡಾ ಠಾಣೆ ವ್ಯಾಪ್ತಿಯಲ್ಲಿ ನಕ್ಸಲರು ಪಡೆಗಳನ್ನು ಗುರಿಯಾಗಿರಿಸಿಕೊಂಡು ಗುಂಡು ಹಾರಿಸಿದ್ದಾರೆ. ನಂತರ ಭದ್ರತಾ ಪಡೆಗಳೂ ಪ್ರತಿ ದಾಳಿ ನಡೆಸಿವೆ.
ರಾಯಪುರದಿಂದ 400 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ. ಇದುವರೆಗೆ ಎಂಟು ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ನಕ್ಸಲ್ ಕಾರ್ಯಾಚರಣೆಯ ಡಿಜಿ ಅಶೋಕ್ ಜುನೇಜಾ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:12 ವರ್ಷದ ಬಾಲಕನ ಜೀವಕ್ಕೆ ಮುಳುವಾಯ್ತು ಪಬ್ ಜಿ ಸೇಡು: ಜೊತೆ ಆಟಗಾರ ಬಾಲಕ ಪೊಲೀಸ್ ವಶಕ್ಕೆ!
ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್ ಗಢ್ ಸಿಎಂ ಗೆ ಕರೆ ಮಾಡಿ ಪರಿಸ್ಥಿತಿಯ ಬಗ್ಗ ಮಾಹಿತಿ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ಟ್ವೀಟ್ ಮಾಡಿ, ಗಾಯಗೊಂಡ ಭದ್ರತಾ ಸಿಬ್ಬಂದಿಯ ಶೀಘ್ರ ಗುಣಮುಖರಾಗಲು ಹಾರೈಸಿದ್ದಾರೆ. ಅಲ್ಲದೆ, ಮಾವೋವಾದಿಗಳ ವಿರುದ್ಧದ ಹೋರಾಟದಲ್ಲಿ ಮಡಿದ ಯೋಧರ ಕುಟುಂಬದ ಜತೆ ನಾವಿರುತ್ತೇವೆಂದು ಟ್ವೀಟ್ ಮೂಲಕ ಧೈರ್ಯ ತುಂಬಿದ್ದಾರೆ.
ಇದನ್ನೂ ಓದಿ: ನಕ್ಸಲ್ ದಾಳಿ : ಹುತಾತ್ಮ ಯೋಧರ ಕುಟುಂಬಗಳಿಗೆ ಸಚಿವ ಅಮಿತ್ ಶಾ ಸಾಂತ್ವನ