Advertisement

ಒಬ್ಬ ಪರೀಕ್ಷಾರ್ಥಿಗೆ 18 ಸಿಬ್ಬಂದಿ ಕಾರ್ಯ ನಿರ್ವಹಣೆ

11:29 AM Mar 09, 2019 | |

ಹೂವಿನಹಿಪ್ಪರಗಿ: ವಡವಡಗಿ ಗ್ರಾಮದ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಜಾಲಹಳ್ಳಿ ಜಯಶಾಂತಲಿಂಗೇಶ್ವರ ಪಪೂ ಮಹಾವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಪಿಯು ದ್ವಿತೀಯ ಉರ್ದು ಪರೀಕ್ಷೆಗೆ ಒಬ್ಬನೇ ಒಬ್ಬ ವಿದ್ಯಾರ್ಥಿ ಕುಳಿತಿದ್ದು, ಆತನಿಗೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು, ಜಾಗೃತ ದಳದ ಸಿಬ್ಬಂದಿ, ಪ್ರಶ್ನೆ ಪತ್ರಿಕೆ ವಿತರಣೆ ಮಾಡಲು ಸದಸ್ಯರು, ಉತ್ತರ ಪತ್ರಿಕೆ ಪಾಲಕರು, ಕಚೇರಿ ಅಧೀಕ್ಷಕರು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು, ಕಚೇರಿ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಸೇರಿ ಹೀಗೆ 18 ಸಿಬ್ಬಂದಿ ಕಾರ್ಯ ನಿರ್ವಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next