Advertisement
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ , ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ.ಅತೀಕ್ ಭಾಗವಹಿಸಿದ್ದ ಸಭೆಯಲ್ಲಿ ಈ ಯೋಜನೆಗಳಿಗೆ ಅನುಮೋದನೆ ದೊರೆತಿದೆ. ಇದರಲ್ಲಿ 8220.05 ಕೋಟಿ ರೂ. ಮೊತ್ತದ 6 ಹೊಸ ಯೋಜನೆಗಳು ಹಾಗೂ 9,615.85 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಸೇರಿವೆ.
Related Articles
ರಾಜ್ಯದಲ್ಲಿ ಹೊಸದಾಗಿ ಒಟ್ಟು 6 ಕಂಪನಿಗಳು ಹೂಡಿಕೆ ಮಾಡಲಿವೆ. ಎಸ್‌ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜೆ¾ಂಟ್ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ… ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು 8220.05 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಅಂದಾಜಿಸಲಾಗಿದೆ.
Advertisement
ಹೆಚ್ಚುವರಿ ಹೂಡಿಕೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿ ಎಸ್‌ಎಸ್‌ಎನ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪರ್ವ ಪ್ರೈವೇಟ್ ಲಿಮಿಟೆಡ್ ), ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‌ಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋರ್ಲಾ ಎನರ್ಜಿ ಪ್ರೈವೇಟ್ ಲಿಮಿಟೆಡ್ ), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನಾ#† ಲಿಮಿಟೆಡ್ ಮತ್ತು ಸ್ಪೈಡರ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು 9,615.85 ಕೋಟಿ ರೂ.ಗಳಷ್ಟಿದೆ.