Advertisement

ವಿದೇಶದಿಂದ ಬಂದ 183 ಪ್ರಯಾಣಿಕರ ತಪಾಸಣೆ

05:20 PM Mar 21, 2020 | Team Udayavani |

ದೇವನಹಳ್ಳಿ: ವಿದೇಶಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 183 ವಿದೇಶಿ ಪ್ರಯಾಣಿಕರನ್ನು ಕೋವಿಡ್ 19 ಶಂಕೆ ಹಿನ್ನೆಲೆ ತಪಾಸಣೆ ನಡೆಸಲಾಗಿದೆ ಎಂದು ಡೀಸಿ ಪಿ.ಎನ್‌.ರವೀಂದ್ರ ತಿಳಿಸಿದರು.

Advertisement

ಗುರುವಾರ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 8 ಗಂಟೆಯವರೆಗೆ 183 ಜನರನ್ನು ತಪಾಸಣೆ ಮಾಡಲಾಗಿದೆ. ಎ-ವರ್ಗದಲ್ಲಿ 2, ಬಿ-ವರ್ಗದಲ್ಲಿ 15, ಸಿ-ವರ್ಗದಲ್ಲಿ 166 ಜನರನ್ನು ತಪಾಸಣೆ ಗೊಳಪಡಿಸಿ ಅವರವರ ಮನೆಗೆ ಕಳುಹಿಸಿ ಕೊಡಲಾಗಿದೆ. ಮನೆಯಲ್ಲಿಯೇ 14 ದಿನಗಳ ಕಾಲ ಪ್ರತ್ಯೇಕವಾಗಿರುವಂತೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಬಸ್‌ಗಳ ಮೂಲಕ ಆಕಾಶ್‌ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ.ವಿಮಾನ ನಿಲ್ದಾಣದಲ್ಲಿ ಥರ್ಮಮೀಟರ್‌ನಿಂದ ಒಂದು ಬಾರಿ ಪರಿಶೀಲನೆ ಮಾಡಿದ ನಂತರ ಮತ್ತೂಂದು ಬಾರಿ ಆಕಾಶ್‌ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸುತ್ತೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ರಾತ್ರಿ-ಹಗಲು ಮೂರು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ತಾಳ್ಮೆಯಿಂದ ಇದ್ದು, ಅಧಿಕಾರಿಗಳಿಗೆ ಸಹರಿಸುವಂತಾಗಬೇಕು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next