Advertisement

ಒಂದೇ ದಿನದಲ್ಲಿ ದಾಖಲೆಯ ಕೋವಿಡ್ ಸೋಂಕಿತರು: ದೇಶದಲ್ಲಿ 1,84,372 ಜನರಿಗೆ ಸೋಂಕು ದೃಢ

01:01 PM Apr 14, 2021 | Team Udayavani |

ಹೊಸದಿಲ್ಲಿ: ದೇಶದಲ್ಲಿ 24 ಗಂಟೆ ಅವಧಿಯಲ್ಲಿ 1,84,372 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಕಳೆದ ವರ್ಷ ದೇಶದಲ್ಲಿ ಕೋವಿಡ್ ಸೋಂಕು ಹರಡಲು ಆರಂಭವಾದ ಬಳಿಕ ಒಂದು ದಿನದಲ್ಲಿ ಅತೀ ಹೆಚ್ಚಿನ ಸೋಂಕಿತರ ಸಂಖ್ಯೆ ಇದಾಗಿದೆ.

Advertisement

ದೇಶದ ಒಟ್ಟು ಸೋಂಕಿತರ ಸಂಖ್ಯೆ 1,32,73,825ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯ ಅವಧಿಯಲ್ಲಿ 1027 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 1,72,085ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ಬೆಳಗ್ಗೆ ಆರೋಗ್ಯ ಸಂಸ್ಥೆ ನೀಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ವಿಶ್ವದಾದ್ಯಂತ ಮಾರುಕಟ್ಟೆಗಳಲ್ಲಿ ಸಸ್ತನಿಗಳ ಮಾರಾಟ ನಿಷೇಧಕ್ಕೆ WHO ಆದೇಶ  

ಸದ್ಯ ದೇಶದಲ್ಲಿ 13,64,704 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಮಂಗಳವಾರ 1,61,736 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದವು.

ಕರ್ನಾಟಕದಲ್ಲಿಯೂ ಮಂಗಳವಾರ 8778 ಕೋವಿಡ್ ಪ್ರಕರಣಗಳು ವರದಿಯಾಗಿತ್ತು. ಈಗಾಗಲೇ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಹಾಕಲಾಗಿದ್ದು, ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕು ತಡೆಯಲು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Advertisement

ಇದನ್ನೂ ಓದಿ: ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಯಡಿಯೂರಪ್ಪ

ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರದಲ್ಲಿ 15 ದಿನಗಳ ಕಾಲ ಕರ್ಫ್ಯೂ ಹೇರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next