Advertisement

ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು

11:28 AM Jul 07, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 18,930 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,35,66,739ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಜುಲೈ 07) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ

ಬುಧವಾರ ದೇಶದಲ್ಲಿ 16,159 ಕೋವಿಡ್ ಪ್ರಕರಣಗಳು ವರದಿಯಾಗಿತ್ತು. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,19,457ಕ್ಕೆ ಏರಿಕೆಯಾಗಿದೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.53ರಷ್ಟಿದೆ.

24ಗಂಟೆಯಲ್ಲಿ 4,245 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ ಕೋವಿಡ್ ನಿಂದ 35 ಜನರು ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,25,305ಕ್ಕೆ ಏರಿಕೆಯಾಗಿದೆ.

ಒಂದೇ ದಿನದಲ್ಲಿ ದೇಶಾದ್ಯಂತ 4,38,005 ಜನರನ್ನು ಪರೀಕ್ಷಿಸಲಾಗಿದ್ದು, ಈವರೆಗೆ ಒಟ್ಟು 86.53 ಕೋಟಿ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.4.32ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.3.86ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next