ಲಕ್ನೋ: ದೆಹಲಿ-ಸಹರ್ಸಾ ವೈಶಾಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 19 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಉತ್ತರ ಪ್ರದೇಶದ ಇಟಾವಾದಲ್ಲಿ ಸಂಭವಿಸಿದೆ.
ರೈಲು ದೆಹಲಿಯಿಂದ ಬಿಹಾರದ ಸಹರ್ಸಾಗೆ ಪ್ರಯಾಣಿಸುತ್ತಿದ್ದಾಗ ಪ್ಯಾಂಟ್ರಿ ಕಾರ್ ಬಳಿಯ S6 ಕೋಚ್‌ನಲ್ಲಿ ಬೆಳಗಿನ ಜಾವ 2:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೇ ಅಧಿಕಾರಿ ಉದಯ್ ಶಂಕರ್ ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
“ಪ್ಯಾಂಟ್ರಿ ಕಾರ್ ಬಳಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಯಲ್ಲಿ ಕನಿಷ್ಠ ಹತ್ತೊಂಬತ್ತು ಜನರು ಗಾಯಗೊಂಡಿದ್ದಾರೆ. ಬೆಂಕಿ ಏಕೆ ಸಂಭವಿಸಿದೆ ಎಂಬುದರ ಕುರಿತು ತನಿಖೆ ನಡೆಯಲಿದೆ” ಎಂದು ಶಂಕರ್ ಹೇಳಿದ್ದಾರೆ.
ಬೆಂಕಿ ಅವಘಡ ಸಂಭವಿಸಿದ ಬಳಿಕ ಕೋಚ್ ಒಳಗೆ ಸಿಲುಕಿಕೊಂಡಿದ್ದ ಸುಮಾರು ಹನ್ನೊಂದು ಪ್ರಯಾಣಿಕರು ಉಸಿರಾಟದ ಸಮಸ್ಯೆಗೆ ಒಳಗಾಗಿದ್ದರು, ಉಳಿದ ಎಂಟು ಮಂದಿಗೆ ಸಣ್ಣಪುಟ್ಟ ಸುಟ್ಟ ಗಾಯಗಳೊಂದಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Daily Horoscope: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ ಪ್ರಕಟಿಸಲು ಅವಕಾಶ