ನವದೆಹಲಿ: ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಶಿವ ಸೇನಾ, ತೃಣಮೂಲ ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28ರ ನೂತನ ಸಂಸತ್ ಉದ್ಘಾಟನೆಯನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿವೆ.
ಇದನ್ನೂ ಓದಿ:ʼದಂಗಲ್ʼ ನಟಿಯೊಂದಿಗೆ ಪಿಕಲ್‌ಬಾಲ್ ಆಡಿದ ಆಮಿರ್: ʼLove birdsʼ ಎಂದ ನೆಟ್ಟಿಗರು
ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು 19 ವಿರೋಧ ಪಕ್ಷಗಳು ಬಿಡುಗಡೆ ಮಾಡಿರುವ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.
19 ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ. ಕಾಂಗ್ರೆಸ್, ಡಿಎಂಕೆ, ಆಪ್, ಟಿಎಂಸಿ, ಶಿವಸೇನಾ, ಸಮಾಜವಾದಿ ಪಕ್ಷ, ಕಮ್ಯೂನಿಷ್ಟ್ ಪಕ್ಷ, ಜಾರ್ಖಂಡ್ ಮುಕ್ತಿ ಮೋರ್ಚಾ, ಕೇರಳ ಕಾಂಗ್ರೆಸ್ (ಮಣಿ), ವಿಸಿಕೆ, ಆರ್ ಜೆಡಿ ಮತ್ತು ಜೆಡಿಯು, ಎನ್ ಸಿಪಿ, ಸಿಪಿಐಎಂ, ಯೂನಿಯನ್ ಮುಸ್ಲಿಂ ಲೀಗ್, ನ್ಯಾಷನಲ್ ಕಾನ್ಫರೆನ್ಸ್, ಆರ್ ಎಸ್ ಪಿ, ಎಂಡಿಎಂಕೆ ಪಕ್ಷಗಳು ಉದ್ಘಾಟನಾ ಸಮಾರಂಭಕ್ಕೆ ಗೈರು ಹಾಜರಾಗುವುದಾಗಿ ಹೇಳಿವೆ.