ಹೊಸದಿಲ್ಲಿ: ಅಧಿವೇಶನಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಹತ್ತೊಂಬತ್ತು ಪ್ರತಿಪಕ್ಷ ಸಂಸದರನ್ನು ರಾಜ್ಯಸಭೆಯಿಂದ ಒಂದು ವಾರದವರೆಗೆ ಅಮಾನತುಗೊಳಿಸಲಾಗಿದೆ. ಈ ಸಂಸದರು ಬೆಲೆ ಏರಿಕೆ ಮತ್ತು ಹಣದುಬ್ಬರದ ವಿರುದ್ಧ ಸದನದೊಳಗೆ ಪ್ರತಿಭಟನೆ ನಡೆಸುತ್ತಿದ್ದರು.
ಸೋಮವಾರ ನಾಲ್ವರು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು. ಸ್ಪೀಕರ್ ಓಂ ಬಿರ್ಲಾ ಅವರು ಎಚ್ಚರಿಕೆ ನೀಡಿದರೂ ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದಿದ್ದಕ್ಕಾಗಿ ಲೋಕಸಭೆಯಲ್ಲಿ ನಾಲ್ವರು ಕಾಂಗ್ರೆಸ್ ಸಂಸದರನ್ನು ಪೂರ್ಣ ಅಧಿವೇಶನದ ಅವಧಿಗೆ ಅಮಾನತು ಮಾಡಲಾಗಿದೆ.
ಅಮಾನತುಗೊಂಡ ವಿಪಕ್ಷ ಸಂಸದರು ಸದನವನ್ನು ಬಿಡದೆ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಇಂದು ಸದನವನ್ನು ಒಂದು ಗಂಟೆ ಮುಂದೂಡಲಾಯಿತು.
ಇದನ್ನೂ ಓದಿ:ಸಾಗರ : ಎಸಿ ನ್ಯಾಯಾಲಯಕ್ಕೆ ಜನನ ಮರಣ ನೋಂದಣಿ ; ವಕೀಲರ ಆಕ್ಷೇಪ
ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸಂಸದರು ಬೆಲೆ ಏರಿಕೆ ಮತ್ತು ಸರಕು ಮತ್ತು ಸೇವಾ ತೆರಿಗೆ ಹೆಚ್ಚಳದಂತಹ ವಿಷಯಗಳ ಕುರಿತು ತುರ್ತು ಚರ್ಚೆಗೆ ಒತ್ತಾಯಿಸುತ್ತಿದ್ದಾರೆ. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಗಿದೆ